< ಕೀರ್ತನೆಗಳು 16 >

1 ದಾವೀದನ ಕಾವ್ಯ. ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.
(다윗의 믹담) 하나님이여, 나를 보호하소서 내가 주께 피하나이다
2 ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.
내가 여호와께 아뢰되 주는 나의 주시오니 주 밖에는 나의 복이 없다 하였나이다
3 ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.
땅에 있는 성도는 존귀한 자니 나의 모든 즐거움이 저희에게 있도다
4 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.
다른 신에게 예물을 드리는 자는 괴로움이 더할 것이라 나는 저희가 드리는 피의 전제를 드리지 아니하며 내 입술로 그 이름도 부르지 아니하리로다
5 ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.
여호와는 나의 산업과 나의 잔의 소득이시니 나의 분깃을 지키시나이다
6 ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ.
내게 줄로 재어 준 구역은 아름다운 곳에 있음이여 나의 기업이 실로 아름답도다
7 ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.
나를 훈계하신 여호와를 송축할지라! 밤마다 내 심장이 나를 교훈하도다
8 ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
내가 여호와를 항상 내 앞에 모심이여 그가 내 우편에 계시므로 내가 요동치 아니하리로다
9 ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು.
이러므로 내 마음이 기쁘고 내 영광도 즐거워하며 내 육체도 안전히 거하리니
10 ೧೦ ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ. (Sheol h7585)
11 ೧೧ ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.

< ಕೀರ್ತನೆಗಳು 16 >