< ಕೀರ್ತನೆಗಳು 17 >
1 ೧ ದಾವೀದನ ಪ್ರಾರ್ಥನೆ. ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.
Ein Gebet Davids. HERR, erhöre die Gerechtigkeit, merke auf mein Geschrei, vernimm mein Gebet, das nicht aus falschem Munde gehet.
2 ೨ ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.
Sprich du in meiner Sache und schaue du aufs Recht!
3 ೩ ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.
Du prüfest mein Herz und besuchest es des Nachts und läuterst mich und findest nichts. Ich habe mir vorgesetzt, daß mein Mund nicht soll übertreten.
4 ೪ ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.
Ich bewahre mich in dem Wort deiner Lippen vor Menschenwerk auf dem Wege des Mörders.
5 ೫ ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.
Erhalte meinen Gang auf deinen Fußsteigen, daß meine Tritte nicht gleiten!
6 ೬ ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.
Ich rufe zu dir, daß du, Gott, wollest mich erhören; neige deine Ohren zu mir, höre meine Rede!
7 ೭ ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.
Beweise deine wunderliche Güte, du Heiland derer, die dir vertrauen, wider die, so sich wider deine rechte Hand setzen.
8 ೮ ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.
Behüte mich wie einen Augapfel im Auge; beschirme mich unter dem Schatten deiner Flügel
9 ೯ ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.
vor den Gottlosen, die mich verstören, vor meinen Feinden, die um und um nach meiner Seele stehen.
10 ೧೦ ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ.
Ihre Fetten halten zusammen; sie reden mit ihrem Munde stolz.
11 ೧೧ ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.
Wo wir gehen so umgeben sie uns; ihre Augen richten sie dahin, daß sie uns zur Erde stürzen,
12 ೧೨ ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.
gleichwie ein Löwe, der des Raubes begehrt, wie ein junger Löwe, der in der Höhle sitzt.
13 ೧೩ ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.
HERR, mache dich auf, überwältige ihn und demütige ihn; errette meine Seele von dem Gottlosen mit deinem Schwert,
14 ೧೪ ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.
von den Leuten deiner Hand, HERR, von den Leuten dieser Welt, welche ihr Teil haben in ihrem Leben, welchen du den Bauch füllest mit deinem Schatz, die da Kinder die Fülle haben und lassen ihr übriges ihren Jungen.
15 ೧೫ ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
Ich aber will schauen dein Antlitz in Gerechtigkeit; ich will satt werden, wenn ich erwache nach deinem Bilde.