< ಕೀರ್ತನೆಗಳು 17 >

1 ದಾವೀದನ ಪ್ರಾರ್ಥನೆ. ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.
Молитва Дави́дова.
2 ನಿನ್ನಿಂದ ನನಗೆ ನ್ಯಾಯವಾದ ತೀರ್ಪು ಉಂಟಾಗಲಿ; ನೀನು ನೀತಿಗನುಸಾರವಾಗಿ ನೋಡುವವನಲ್ಲವೇ.
Від Твого лиця нехай вирок мій ви́йде, а очі Твої нехай бачать мою правоту́!
3 ನೀನು ನನ್ನ ಹೃದಯವನ್ನು ಪರೀಕ್ಷಿಸಿದರೂ, ರಾತ್ರಿಯ ವೇಳೆ ವಿಚಾರಿಸಿದರೂ, ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದರೂ, ಯಾವ ದುರಾಲೋಚನೆಯಾದರೂ ನನ್ನಲ್ಲಿ ದೊರೆಯುವುದಿಲ್ಲ; ನನ್ನ ಬಾಯಿ ಮಾತುಗಳಲ್ಲಿ ತಪ್ಪುವುದಿಲ್ಲ ಎಂದು ತೀರ್ಮಾನಿಸಿದ್ದೇನೆ.
Ти ви́пробував моє серце, навісти́в уночі, перетопи́в Ти мене, — й не знайшов чогось злого. І розду́мував я, щоб лихе з моїх уст не вихо́дило,
4 ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.
а в лю́дських діла́х, за словом уст Твоїх, я стерігся доріг гнобителя.
5 ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.
Зміцняй сто́пи мої на доро́гах Твоїх, щоб кро́ки мої не хита́лися!
6 ದೇವರೇ, ನನಗೆ ಸದುತ್ತರವನ್ನು ದಯಪಾಲಿಸುವಿಯೆಂದು ಮೊರೆಯಿಡುತ್ತೇನೆ, ಕಿವಿಗೊಟ್ಟು ಕೇಳು.
Я кли́чу до Тебе, бо відповіси́ мені, Боже, — нахили Своє ухо до мене, вислухай мову мою,
7 ಭುಜಬಲವನ್ನು ಪ್ರಯೋಗಿಸಿ, ಶರಣಾಗತರನ್ನು ವಿರೋಧಿಗಳಿಂದ ರಕ್ಷಿಸುವಾತನೇ, ನಿನ್ನ ಪ್ರೀತಿಯನ್ನು ವಿಶೇಷವಾಗಿ ತೋರಿಸು.
покажи дивну милість Свою, Спасителю тих, хто вдає́ться до Тебе від заколо́тників проти прави́ці Твоєї.
8 ನನ್ನನ್ನು ಸುತ್ತಿಕೊಂಡು ಬಾಧಿಸುತ್ತಿರುವ ದುಷ್ಟರಿಂದಲೂ, ಪ್ರಾಣವೈರಿಗಳಿಂದಲೂ ತಪ್ಪಿಸಿದ್ದಿ.
Хорони Ти мене, як зіни́цю Свою, дочку ока, у тіні Своїх крил заховай Ти мене
9 ನಿನ್ನ ರೆಕ್ಕೆಗಳ ಮರೆಯಲ್ಲಿಟ್ಟುಕೊಂಡು ನನ್ನನ್ನು ದುಷ್ಟರಿಂದ ಕಾಯಿ; ಕಣ್ಣು ಗುಡ್ಡಿನಂತೆಯೇ ಕಾಪಾಡು.
від безбожних, що гублять мене, — смертельні мої вороги оточили мене!
10 ೧೦ ಅವರು ತಮ್ಮ ಹೃದಯವನ್ನು ಕಠಿಣಮಾಡಿದ್ದಾರೆ; ಅಹಂಕಾರದಿಂದ ಮಾತನಾಡುತ್ತಾರೆ.
То́вщем замкнули вони своє серце, уста їхні говорять бундю́чно.
11 ೧೧ ನಾವು ಎಲ್ಲಿ ಕಾಲಿಟ್ಟರೂ ಅಲ್ಲೆಲ್ಲಾ ನಮ್ಮನ್ನು ಸುತ್ತಿಕೊಳ್ಳುತ್ತಾರೆ; ನಮ್ಮನ್ನು ನೆಲಕ್ಕೆ ಬೀಳಿಸಬೇಕೆಂದು ಸಮಯನೋಡುತ್ತಾರೆ.
Вороги оточили тепер наші кро́ки, наставили очі свої, щоб мене повалити на землю.
12 ೧೨ ನನ್ನ ಶತ್ರುವು ಸೀಳಿಬಿಡಲಾಶಿಸುವ ಸಿಂಹದಂತೆಯೂ, ಮರೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹದಂತೆಯೂ ಇದ್ದಾನೆ.
Із них кожен подібний до лева, що ша́рпати прагне, й як левчук, що сидить в укритті́.
13 ೧೩ ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.
Устань же, о Господи, — його попере́дь, кинь його на коліна! Мечем Своїм душу мою збережи від безбожного,
14 ೧೪ ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.
від людей рукою Своєю, Господи, від людей цього світу, що частка їхня в цьому житті, що Ти скарбом Своїм наповня́єш їхнє че́рево! Ситі їхні сини, останок же свій для дітей вони ли́шать.
15 ೧೫ ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
А я в правді побачу обли́ччя Твоє, і, збудившись, наси́чусь Твоєю подо́бою!

< ಕೀರ್ತನೆಗಳು 17 >