< ಕೀರ್ತನೆಗಳು 18 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಯೆಹೋವನ ಸೇವಕನಾದ ದಾವೀದನು ಸೌಲನಿಂದಲೂ, ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸಲ್ಪಟ್ಟಾಗ ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು. ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.
Awurade akoa Dawid dwom. Ɔtoo saa dwom yi maa Awurade, bere a ogyee no fii nʼatamfo nyinaa ne Saulo nsam no. Medɔ wo, Awurade, mʼahoɔden.
2 ೨ ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
Awurade ne me botantim; mʼaban ne me gyefo; me Nyankopɔn yɛ me botan. Ne mu na minya me hintabea. Ɔyɛ me nkatabo, me nkwagye abɛn ne mʼabandennen.
3 ೩ ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
Misu frɛ Awurade; ɔno na ayeyi sɛ no, efisɛ ogye me fi mʼatamfo nsam.
4 ೪ ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.
Owu nkɔnsɔnkɔnsɔn kyekyeree me; na ɔsɛe asorɔkye bu faa me so.
5 ೫ ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು. (Sheol )
Ɔda mu hama kyekyeree me; mihyiaa owu mfiri. (Sheol )
6 ೬ ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.
Mʼahohia mu, misu frɛɛ Awurade. Misu frɛɛ me Nyankopɔn hwehwɛɛ mmoa. Ofi nʼasɔrefi hɔ tee me nne; me sufrɛ baa nʼanim, na ɛkɔɔ nʼasom.
7 ೭ ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.
Asase wosowee na ehinhimii, na mmepɔw fapem wosowee wosuroe, efisɛ na ne bo afuw.
8 ೮ ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
Wusiw fii ne hwene mu; ogyaframa fii nʼanom, na nnyansramma dɛw fii mu.
9 ೯ ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.
Ofii ɔsoro baa fam; na omununkum kabii duruu nʼanan ase.
10 ೧೦ ಕೆರೂಬಿವಾಹನನಾಗಿ ಹಾರಿ, ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಆತನು ಇಳಿದು ಬಂದನು.
Ɔte kerubim so tu kɔɔ soro; gyaagyaa ne ho wɔ mframa ntaban so.
11 ೧೧ ಕತ್ತಲನ್ನು ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡು, ಜಲಮಯವಾಗಿರುವ ನೀಲಮೇಘಗಳ ಮಧ್ಯದಲ್ಲಿ ಮರೆಯಾದನು.
Ɔde sum kataa ne ho, osu a amuna tumm atwa ne ho ahyia.
12 ೧೨ ಆತನ ಸನ್ನಿಧಿಯ ಪ್ರಕಾಶದಿಂದ ಕಲ್ಮಳೆಯೂ, ಉರಿಗೆಂಡಗಳೂ ಹೊರಟು, ಆತನ ಸುತ್ತಲಿದ್ದ ಕಪ್ಪು ಮೋಡಗಳನ್ನು ದಾಟಿ ಸುರಿದವು.
Hann kɛse hyerɛn wɔ nʼanim, na omununkum a mparuwbo ne anyinam wɔ mu fii ne ho hyerɛn mu bae.
13 ೧೩ ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನಾದ ದೇವರು ಧ್ವನಿಗೊಟ್ಟನು. ಕಲ್ಮಳೆಯೂ, ಉರಿಗೆಂಡಗಳೂ ಹೊರಟವು.
Awurade bobɔɔ mu fii ɔsoro; Ɔsorosoroni no nne gyigyee bio.
14 ೧೪ ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು.
Ɔtow ne bɛmma no de bɔɔ atamfo no ahwete, ɔde anyinam a ano yɛn den pam wɔn.
15 ೧೫ ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.
Po mu abon ho yiyii na asase nnyinaso ho daa hɔ, esiane wʼanimka ne ahomegu a efi wo hwene mu no nti, Awurade.
16 ೧೬ ಆತನು ಮೇಲಣ ಲೋಕದಿಂದ ಕೈಚಾಚಿ, ನನ್ನನ್ನು ಹಿಡಿದು, ಮಹಾಜಲರಾಶಿಗಳೊಳಗಿಂದ ಎಳೆದನು.
Ofi soro baa fam besoo me mu; ɔtwee me fii nsu a mu dɔ mu.
17 ೧೭ ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.
Ogyee me fii me tamfo hoɔdenfo nsam, wɔn a wɔn ani sa me, na wɔn ho yɛ den dodo ma me no.
18 ೧೮ ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು, ಆಗ ಯೆಹೋವನು ನನಗೆ ಉದ್ಧಾರಕನಾದನು.
Wɔbaa me so wɔ mʼamanehunu da mu, nanso Awurade maa me so,
19 ೧೯ ಆತನು ನನ್ನನ್ನು ಬಿಡಿಸಿ ವಿಶಾಲ ಸ್ಥಳದಲ್ಲಿ ಸೇರಿಸಿದನು; ನನ್ನನ್ನು ಮೆಚ್ಚಿ ರಕ್ಷಿಸಿದನು.
wode me baa baabi a hɔ trɛw; ogyee me, efisɛ nʼani sɔɔ me.
20 ೨೦ ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲನ್ನು ಮಾಡಿದನು, ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಟ್ಟನು.
Awurade ne me adi no sɛnea me trenee te; wahwɛ me nsa a ho tew so atua me ka.
21 ೨೧ ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.
Manantew Awurade akwan so. Mentwee me ho mfii me Nyankopɔn ho nkɔyɛɛ bɔne ɛ.
22 ೨೨ ನಾನು ಆತನ ನೀತಿಯ ಆಜ್ಞೆಗಳನ್ನು ಯಾವಾಗಲೂ ನನ್ನ ಎದುರಿನಲ್ಲಿ ಇಟ್ಟುಕೊಂಡೆನು; ಆತನ ವಿಧಿಗಳನ್ನು ಅಲಕ್ಷ್ಯಮಾಡಲೇ ಇಲ್ಲ.
Madi ne mmara nyinaa so: mimmuu nʼahyɛde so.
23 ೨೩ ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
Me ho nni asɛm wɔ Onyankopɔn anim, na matwe me ho afi bɔne ho.
24 ೨೪ ಆದುದರಿಂದ ನಾನು ನೀತಿವಂತನೂ, ನಿರಪರಾಧಿಯೂ ಎಂದು ನೋಡಿ, ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.
Awurade agyina me treneeyɛ ne me nsa a ho tew wɔ nʼanim no so atua me ka.
25 ೨೫ ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವನಿಗೆ ನಿರ್ದೋಷಿಯೂ,
Woda wo ho adi sɛ ɔnokwafo kyerɛ wɔn a wodi nokware, wɔn a wodi mu nso wokyerɛ wɔn sɛ wodi mu.
26 ೨೬ ಶುದ್ಧನಿಗೆ ಪರಿಶುದ್ಧನೂ, ಮೂರ್ಖನಿಗೆ ವಕ್ರನೂ ಆಗಿರುವಿ.
Woyɛ kronkron ma wɔn a wɔyɛ kronkron, na amumɔyɛfo de, wukyi wɔn.
27 ೨೭ ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?
Wugye ahobrɛasefo nkwa, na wobrɛ ahantanfo ase.
28 ೨೮ ನೀನೇ ನನ್ನ ದೀಪವನ್ನು ಹೊತ್ತಿಸುವವನಲ್ಲವೇ; ನನ್ನ ದೇವರಾದ ಯೆಹೋವನು ನನಗೆ ಬೆಳಕನ್ನು ಕೊಟ್ಟು ಕತ್ತಲನ್ನು ಪರಿಹರಿಸುವವನು.
Awurade, woma me kanea hyerɛn. Yiw, woma me sum dan hann.
29 ೨೯ ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು.
Wʼahoɔden a wode ma me nti, mitumi ka asraafo gu; me Nyankopɔn nti, mitumi foro ɔfasu.
30 ೩೦ ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
Onyankopɔn de, nʼakwan yɛ pɛ; Awurade bɔhyɛ nyinaa ba mu. Ɔyɛ nkatabo ma wɔn a wɔhwehwɛ bammɔ wɔ ne mu.
31 ೩೧ ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
Na hena na ɔyɛ Onyankopɔn ka Awurade ho? Hena na ɔyɛ Ɔbotan no? Gye sɛ yɛn Nyankopɔn no.
32 ೩೨ ನನಗೆ ಶೌರ್ಯವೆಂಬ ನಡುಕಟ್ಟನ್ನು ಬಿಗಿಯುವವನೂ, ನನ್ನ ಮಾರ್ಗವನ್ನು ಸರಾಗ ಮಾಡುವವನೂ ದೇವರೇ.
Ɛyɛ Onyankopɔn na ɔma me ahoɔden, na ɔma me kwan yɛ pɛ.
33 ೩೩ ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ; ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.
Ɔma mʼanammɔn ho yɛ hare sɛ ɔforote de. Ɔma me gyina sorɔnsorɔmmea.
34 ೩೪ ಆತನೇ ನನಗೆ ಯುದ್ಧವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
Osiesie me ma ɔko, na me basa tumi kuntun kɔbere mfrafrae tadua.
35 ೩೫ ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.
Wode wo ogye boa me nkatabo, na wo nsa nifa ma me gyina. Wobrɛ wo ho ase ma meyɛ ɔkɛse.
36 ೩೬ ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಪಾದಗಳು ಕದಲುವುದಿಲ್ಲ.
Woabɔ kwan tɛtrɛɛ ama mʼanan sɛnea me nkotodwe rengurow.
37 ೩೭ ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
Metaa mʼatamfo kɔtoo wɔn; mansan mʼakyi kosii sɛ mesɛee wɔn.
38 ೩೮ ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.
Mɛdwerɛw wɔn, na wɔantumi ansɔre, wɔhwehwee ase wɔ mʼanan ase.
39 ೩೯ ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದೀ.
Wode akodi ahoɔden maa me; womaa mʼatamfo bɔɔ wɔn mu ase wɔ me nan ase.
40 ೪೦ ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ; ನನ್ನ ಹಗೆಯವರನ್ನು ನಾನು ನಿರ್ಮೂಲಮಾಡುವೆನು.
Womaa mʼatamfo dan wɔn ho guanee, na mesɛe wɔn a wɔtan me.
41 ೪೧ ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
Wosu hwehwɛɛ mmoa, nanso obiara ammegye wɔn, wɔfrɛɛ Awurade, nanso wammua.
42 ೪೨ ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ಎಸೆದುಬಿಟ್ಟೆನು.
Meyam wɔn sɛ mfutuma a mframa bɔ gu; mihwiee wɔn guu sɛ mmɔnten so dontori.
43 ೪೩ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
Woagye me afi nnipa no ɔfow mu, woayɛ me amanaman no ti; nnipa a minnim wɔn abɛyɛ mʼasomfo.
44 ೪೪ ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಅಂಜಿ ನಡುಗುವರು.
Wɔte me nka pɛ a, wɔyɛ osetie ma me; ananafo kotow mʼanim.
45 ೪೫ ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
Wɔn nyinaa botobotow; wofi wɔn abandennen mu ba ahopopo so.
46 ೪೬ ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ; ನನ್ನನ್ನು ರಕ್ಷಿಸುವ ದೇವರಿಗೆ ಕೊಂಡಾಟವಾಗಲಿ.
Awurade te ase! Ayeyi nka me Botan! Wɔmma Onyankopɔn, me Gyefo no din so!
47 ೪೭ ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
Ɔno ne Onyankopɔn a ɔtɔ were ma me, ɔno na ɔka amanaman hyɛ mʼase,
48 ೪೮ ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.
ɔno na ogye me fi mʼatamfo nsam. Wopagyaw me sii mʼatamfo so, wugyee me fii basabasayɛfo nsam.
49 ೪೯ ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.
Ɛno nti, mɛkamfo wo wɔ amanaman mu, Ao Awurade. Mɛto ayeyi dwom ama wo din.
50 ೫೦ ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.
Wode nkonimdi akɛse ama wo hene; woda ɔdɔ a ɛnsa da adi kyerɛ nea woasra no ngo, wode kyerɛ Dawid, ne nʼasefo afebɔɔ. Wɔde ma dwonkyerɛfo.