< ಕೀರ್ತನೆಗಳು 2 >
1 ೧ ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
Adɛn nti na amanaman no hyehyɛ bɔne ho na nnipa no bɔ pɔw hunu yi?
2 ೨ ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
Asase so ahemfo sɔre gyina na sodifo ka wɔn ho bɔ mu tia Awurade ne Nea Wɔasra no no.
3 ೩ “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ.
Wɔka se, “Momma yemmubu wɔn nkɔnsɔnkɔnsɔn na yɛntow wɔn mpokyerɛ ngu.”
4 ೪ ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
Nea ɔte agua so wɔ ɔsoro no serew; Awurade di wɔn ho fɛw.
5 ೫ ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,
Afei ɔka wɔn anim wɔ nʼabufuw mu, hunahuna wɔn wɔ nʼabufuwhyew mu, ka se,
6 ೬ “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
“Masi me Hene wɔ Sion, me bepɔw kronkron no so.”
7 ೭ ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
Mɛpae mu aka Awurade ahyɛde: Ɔka kyerɛɛ me se, “Woyɛ me Ba; nnɛ mayɛ wʼAgya.
8 ೮ ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.
Bisa me, na mede amanaman nyinaa bɛyɛ wʼagyapade, asase ano nyinaa bɛyɛ wo de.
9 ೯ ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.
Wode dade ahempema bedi wɔn so; na woabobɔ wɔn sɛ ɔnwemfo ahina.”
10 ೧೦ ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.
Enti mo ahemfo, munsua nyansa; monkae kɔkɔbɔ yi, mo asase sodifo.
11 ೧೧ ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.
Momfa osuro nsom Awurade na monsɛpɛw mo ho ahopopo mu.
12 ೧೨ ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.
Mumfew Ɔba no ano, na ne bo amfuw na mo akwan de mo bɛkɔ ɔsɛe mu, efisɛ nʼabufuwhyew tumi sɔre mpofirim. Nhyira ne wɔn a woguan toa no nyinaa.