< ಕೀರ್ತನೆಗಳು 20 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.
For the music director. A psalm of David. May the Lord answer you when you are in trouble; may the name of the God of Jacob protect you.
2 ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.
May the Lord send you help from the sanctuary, and may he support you from Zion.
3 ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. (ಸೆಲಾ)
May the Lord remember all your offerings, and accept all your burnt sacrifices. (Selah)
4 ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.
May the Lord give you whatever you really want; may he make all your plans successful.
5 ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.
May we shout for joy over your victory, and set up banners in the name of our God. May the Lord answer all your requests.
6 ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.
Now I know that the Lord saves the one he has anointed. He will answer him from his holy heaven, and save his anointed by his powerful right hand.
7 ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
Some trust in chariots and some in war horses, but we trust in who the Lord our God is.
8 ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.
They collapse and fall down, but we rise and stand up.
9 ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.
May the Lord save the king! Please answer us when we call for help!

< ಕೀರ್ತನೆಗಳು 20 >