< ಕೀರ್ತನೆಗಳು 20 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.
Müzik şefi için - Davut'un mezmuru Sıkıntılı gününde RAB seni yanıtlasın, Yakup'un Tanrısı'nın adı seni korusun!
2 ೨ ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.
Yardım göndersin sana kutsal yerden, Siyon'dan destek versin.
3 ೩ ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. (ಸೆಲಾ)
Bütün tahıl sunularını anımsasın, Yakmalık sunularını kabul etsin! (Sela)
4 ೪ ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.
Gönlünce versin sana, Bütün tasarılarını gerçekleştirsin!
5 ೫ ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.
O zaman zaferini sevinç çığlıklarıyla kutlayacağız, Tanrımız'ın adıyla sancaklarımızı dikeceğiz. RAB senin bütün dileklerini yerine getirsin.
6 ೬ ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು. ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು, ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.
Şimdi anladım ki, RAB meshettiği kralı kurtarıyor, Sağ elinin kurtarıcı gücüyle Kutsal göklerinden ona yanıt veriyor.
7 ೭ ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
Bazıları savaş arabalarına, Bazıları atlarına güvenir, Bizse Tanrımız RAB'bin adına güveniriz.
8 ೮ ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.
Onlar çöküyor, düşüyorlar; Bizse kalkıyor, dimdik duruyoruz.
9 ೯ ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು.
Ya RAB, kralı kurtar! Yanıtla bizi sana yakardığımız gün!