< ಕೀರ್ತನೆಗಳು 21 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.
Przedniejszemu śpiewakowi pieśń Dawidowa. Panie! w mocy twojej raduje się król, a w zbawieniu twojem wielce się weseli.
2 ೨ ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. (ಸೆಲಾ)
Dałeś mu żądość serca jego, a prośby ust jego nie odmówiłeś mu. (Sela)
3 ೩ ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.
Albowiemeś go uprzedził błogosławieństwy hojnemi; włożyłeś na głowę jego koronę ze złota szczerego.
4 ೪ ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.
Prosił cię o żywot, a dałeś mu przedłużenie dni na wieki wieków.
5 ೫ ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.
Wielka jest chwała jego w zbawieniu twojem; chwałą i zacnością przyodziałeś go;
6 ೬ ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.
Boś go wystawił na rozmaite błogosławieństwo aż na wieki; rozweseliłeś go weselem oblicza twego.
7 ೭ ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.
Gdyż król nadzieję ma w Panu, a z miłosierdzia Najwyższego nie będzie poruszony.
8 ೮ ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.
Znajdzie ręka twoja wszystkich nieprzyjaciół twoich, prawica twoja dosięże wszystkich, co cię w nienawiści mają.
9 ೯ ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
Uczynisz ich jako piec ognisty czasu gniewu twego; Pan w popędliwości swojej wytraci ich, a ogień ich pożre.
10 ೧೦ ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.
Plemię ich z ziemi wygubisz, a nasienie ich z synów ludzkich.
11 ೧೧ ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.
Albowiem czyhali na twoje złe; zmyślali radę, której dowieść nie mogli.
12 ೧೨ ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ.
Przetoż wystawisz ich za cel; cięciwę twą wyciągniesz przeciwko twarzy ich.
13 ೧೩ ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.
Podnieśże się, Panie! w mocy twojej, tedy będziemy śpiewać i wysławiać możność twoję.