< ಕೀರ್ತನೆಗಳು 22 >
1 ೧ (ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.) ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?
Til songmeisteren etter «Morgonraudens hind»; ein salme av David. Min Gud, min Gud, kvi hev du forlate meg? Dei ord eg skrik ut, er langt burte frå mi frelsa.
2 ೨ ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ.
Min Gud! eg ropar um dagen, og du svarar meg ikkje, og um natti, og eg fær ikkje tegja.
3 ೩ ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು.
Og du er då heilag, du som bur yver Israels lovsongar.
4 ೪ ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
På deg leit våre feder; dei leit på deg, og du frelste deim.
5 ೫ ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.
Til deg ropa dei og slapp undan; på deg leit dei og vart ikkje til skammar.
6 ೬ ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.
Men eg er ein makk og ikkje ein mann, ei spott for menneskje og vanvyrd av folk.
7 ೭ ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿ ಮಾಡಿ ತಲೆ ಆಡಿಸುತ್ತಾ,
Alle som ser meg, spottar meg, rengjer munnen og rister på hovudet og segjer:
8 ೮ “ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.
«Legg det på Herren! han frelse honom, han berge honom, sidan han hev hugnad i honom!»
9 ೯ ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.
Ja, du er den som drog meg fram frå morslivet, som let meg kvila trygt ved morsbrjostet.
10 ೧೦ ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.
På deg er eg kasta frå morslivet, frå morsfanget er du min Gud.
11 ೧೧ ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.
Ver ikkje langt burte frå meg! for trengsla er nær, for det finst ingen hjelpar.
12 ೧೨ ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.
Sterke uksar ringar meg inne, Basans stutar kringset meg.
13 ೧೩ ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.
Dei spilar upp sitt gap imot meg, som ei flengjande og burande løva.
14 ೧೪ ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.
Eg er runnen ut som vatn, og alle mine bein skilst frå kvarandre; mitt hjarta hev vorte voks, smolte inst i mitt liv.
15 ೧೫ ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.
Mi kraft er uppturka som eit krusbrot, mi tunga kleimer seg til min gom, og du legg meg ned i daudens dust.
16 ೧೬ ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.
For hundar hev sanka seg um meg, ein hop av illmenne kringsett meg; dei hev gjenombora mine hender og mine føter.
17 ೧೭ ನನ್ನ ಎಲುಬುಗಳನ್ನೆಲ್ಲಾ ಎಣಿಸುವುದಕ್ಕಾಗುವುದು; ಅವರೋ ನನ್ನನ್ನು ನೋಡಿ ನೋಡಿ ಹಿಗ್ಗುತ್ತಾರೆ.
Eg kann telja alle mine bein; dei skodar til, dei ser på meg med lyst.
18 ೧೮ ನನ್ನ ಮೇಲ್ಹೊದಿಕೆಯನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗಾಗಿ ಚೀಟುಹಾಕುತ್ತಾರೆ.
Dei skifte mine klæde millom seg og kasta lut um min kjole.
19 ೧೯ ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು.
Men du, Herre, ver ikkje langt burte, du min styrke, skunda deg å hjelpa meg!
20 ೨೦ ಕತ್ತಿಗೆ ಸಿಕ್ಕದಂತೆ ನನ್ನನ್ನು ತಪ್ಪಿಸು; ನನ್ನ ಪ್ರಿಯ ಪ್ರಾಣವು ನಾಯಿಯ ವಶವಾಗದಂತೆ ಕಾಪಾಡು.
Fria mi sjæl frå sverdet, mi einaste frå hundevald!
21 ೨೧ ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.
Frels meg frå løvegap, og frå villukse-horn - du bønhøyrer meg!
22 ೨೨ ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
Eg vil forkynna ditt namn for mine brør, midt i ålmugen vil eg lova deg.
23 ೨೩ ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.
De som ottast Herren, lova honom, all Jakobs ætt, æra honom, og hav age for honom, all Israels ætt!
24 ೨೪ ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
For han hev ikkje vanvyrdt og ikkje stygst ved ein armings armodsdom, og ikkje løynt si åsyn for honom; men då han ropa til honom, høyrde han.
25 ೨೫ ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
Frå deg kjem min lovsong i ein stor ålmuge; eg vil avgjera mine lovnader for deira augo som ottast honom.
26 ೨೬ ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.
Dei audmjuke skal eta og verta mette; dei som søkjer Herren, skal lova honom. Dykkar hjarta live til æveleg tid!
27 ೨೭ ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.
Alle endarne av jordi skal koma det i hug og venda um til Herren, og alle heidninge-ætter skal tilbeda for di åsyn.
28 ೨೮ ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.
For riket høyrer Herren til, og han råder yver alle hedningarne.
29 ೨೯ ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.
Alle rikmenner på jordi skal eta og tilbeda; for hans åsyn skal dei bøygja kne, alle dei som stig ned i dusti, og den som ikkje kann halda si sjæl i live.
30 ೩೦ ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು.
Etterkomarar skal tena honom; det skal verta fortalt um Herren til den komande ætt.
31 ೩೧ ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.
Dei skal koma og forkynna hans rettferd for det folk som vert født, at han hev gjort det.