< ಕೀರ್ತನೆಗಳು 23 >
1 ೧ ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು.
(다윗의 시) 여호와는 나의 목자시니 내가 부족함이 없으리로다
2 ೨ ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.
그가 나를 푸른 초장에 누이시며 쉴만한 물 가으로 인도하시는도다
3 ೩ ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.
내 영혼을 소생시키시고 자기 이름을 위하여 의의 길로 인도하시는도다
4 ೪ ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
내가 사망의 음침한 골짜기로 다닐지라도 해를 두려워하지 않을것은 주께서 나와 함께 하심이라 주의 지팡이와 막대기가 나를 안위하시나이다
5 ೫ ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
주께서 내 원수의 목전에서 내게 상을 베푸시고 기름으로 내 머리에 바르셨으니 내 잔이 넘치나이다
6 ೬ ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
나의 평생에 선하심과 인자하심이 정녕 나를 따르리니 내가 여호와의 집에 영원히 거하리로다