< ಕೀರ್ತನೆಗಳು 24 >

1 ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.
לְדָוִד מִזְמוֹר לַֽיהֹוָה הָאָרֶץ וּמְלוֹאָהּ תֵּבֵל וְיֹשְׁבֵי בָֽהּ׃
2 ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.
כִּי־הוּא עַל־יַמִּים יְסָדָהּ וְעַל־נְהָרוֹת יְכוֹנְנֶֽהָ׃
3 ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?
מִֽי־יַעֲלֶה בְהַר־יְהֹוָה וּמִי־יָקוּם בִּמְקוֹם קׇדְשֽׁוֹ׃
4 ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,
נְקִי כַפַּיִם וּֽבַר־לֵבָב אֲשֶׁר ׀ לֹא־נָשָׂא לַשָּׁוְא נַפְשִׁי וְלֹא נִשְׁבַּע לְמִרְמָֽה׃
5 ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.
יִשָּׂא בְרָכָה מֵאֵת יְהֹוָה וּצְדָקָה מֵאֱלֹהֵי יִשְׁעֽוֹ׃
6 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. (ಸೆಲಾ)
זֶה דּוֹר דֹּרְשָׁו מְבַקְשֵׁי פָנֶיךָ יַעֲקֹב סֶֽלָה׃
7 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
שְׂאוּ שְׁעָרִים ׀ רָֽאשֵׁיכֶם וְֽהִנָּשְׂאוּ פִּתְחֵי עוֹלָם וְיָבוֹא מֶלֶךְ הַכָּבֽוֹד׃
8 ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.
מִי זֶה מֶלֶךְ הַכָּבוֹד יְהֹוָה עִזּוּז וְגִבּוֹר יְהֹוָה גִּבּוֹר מִלְחָמָֽה׃
9 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
שְׂאוּ שְׁעָרִים ׀ רָֽאשֵׁיכֶם וּשְׂאוּ פִּתְחֵי עוֹלָם וְיָבֹא מֶלֶךְ הַכָּבֽוֹד׃
10 ೧೦ ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. (ಸೆಲಾ)
מִי הוּא זֶה מֶלֶךְ הַכָּבוֹד יְהֹוָה צְבָאוֹת הוּא מֶלֶךְ הַכָּבוֹד סֶֽלָה׃

< ಕೀರ್ತನೆಗಳು 24 >