< ಕೀರ್ತನೆಗಳು 24 >
1 ೧ ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.
ダビデのうた 地とそれに充るもの世界とその中にすむものとは皆ヱホバのものなり
2 ೨ ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.
ヱホバはそのもとゐを大海のうへに置これを大川のうへに定めたまへり
3 ೩ ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?
ヱホバの山にのぼるべきものは誰ぞ その聖所にたつべき者はたれぞ
4 ೪ ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,
手きよく心いさぎよき者そのたましひ虚きことを仰ぎのぞまず偽りの誓をせざるものぞ その人なる
5 ೫ ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.
かかる人はヱホバより福祉をうけ そのすくひの神より義をうけん
6 ೬ ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. (ಸೆಲಾ)
斯のごとき者は神をしたふものの族類なり ヤコブの神よなんぢの聖顔をもとむる者なり (セラ)
7 ೭ ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
門よなんぢらの首をあげよ とこしへの戸よあがれ 榮光の王いりたまはん
8 ೮ ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.
えいくわうの王はたれなるか ちからをもちたまふ猛きヱホバなり 戦闘にたけきヱホバなり
9 ೯ ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.
門よなんぢらの首をあげよ とこしへの戸よあがれ 榮光の王いりたまはん
10 ೧೦ ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. (ಸೆಲಾ)
この榮光の王はたれなるか 萬軍のヱホバ是ぞえいくわうの王なる (セラ)