< ಕೀರ್ತನೆಗಳು 25 >
1 ೧ ದಾವೀದನ ಕೀರ್ತನೆ. ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
【靠上主的祈禱】上主,我向你把我的心舉起,
2 ೨ ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
我的天主,我全心要倚靠你。求你不要使我蒙受羞恥,不要容許我的仇人歡喜。
3 ೩ ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
凡期望你的人絕不會蒙羞,唯冒昧失信人才會受辱。
4 ೪ ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.
上主,求你使我認識你的法度,並求你教訓我履行你的道路。
5 ೫ ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
還求你教訓我;引我進入真理之路,我終日仰望你,因你是救我的天主。
6 ೬ ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.
上主,求你憶及的仁慈和恩愛,因為它們由亙古以來就常存在。
7 ೭ ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
我青春的罪愆和過犯,求你要追念;上主,求你紀念我,照你的仁慈和良善。
8 ೮ ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
因為上主仁慈又正直,常領迷途者歸回正路,
9 ೯ ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.
引導謙卑者遵守正義,教善良者走入正途。
10 ೧೦ ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.
對待持守上主的盟約和誡命的人,上主的一切行徑常是慈愛和忠誠。
11 ೧೧ ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.
上主,為了你聖名的緣故,求你赦免我重大的愆尤。
12 ೧೨ ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.
不論是誰,只要他敬愛上主,上主必指示他應選的道路,
13 ೧೩ ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.
他的心靈必要安享幸福,他的後裔必能承繼領土。
14 ೧೪ ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
上主親近敬愛自己的人民,也使他們認識自己的誓盟。
15 ೧೫ ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.
我的眼睛不斷地向上主瞻仰,因為祂使我的雙腳脫離羅網。
16 ೧೬ ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.
求你回顧,求你憐憫,因為我是孤苦伶仃。
17 ೧೭ ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು.
求你減輕我心的苦難,救我脫離我的憂患;
18 ೧೮ ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.
垂視我的勞苦和可憐,赦免我犯的一切罪愆。
19 ೧೯ ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.
請看我的仇敵如何眾多,他們都兇狠地痛恨著我。
20 ೨೦ ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.
求你保謢我的生命,向我施救,別叫我因投奔你而蒙受羞辱。
21 ೨೧ ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.
願清白和正直護衛我!上主,因我唯有仰望你。
22 ೨೨ ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.
天主,求你拯救以色列,使他脫離一切的禍災