< ಕೀರ್ತನೆಗಳು 27 >

1 ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?
לְדָוִ֨ד ׀ יְהוָ֤ה ׀ אוֹרִ֣י וְ֭יִשְׁעִי מִמִּ֣י אִירָ֑א יְהוָ֥ה מָֽעוֹז־חַ֝יַּ֗י מִמִּ֥י אֶפְחָֽד׃
2 ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು.
בִּקְרֹ֤ב עָלַ֨י ׀ מְרֵעִים֮ לֶאֱכֹ֪ל אֶת־בְּשָׂ֫רִ֥י צָרַ֣י וְאֹיְבַ֣י לִ֑י הֵ֖מָּה כָשְׁל֣וּ וְנָפָֽלוּ׃
3 ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು.
אִם־תַּחֲנֶ֬ה עָלַ֨י ׀ מַחֲנֶה֮ לֹֽא־יִירָ֪א לִ֫בִּ֥י אִם־תָּק֣וּם עָ֭לַי מִלְחָמָ֑ה בְּ֝זֹ֗את אֲנִ֣י בוֹטֵֽחַ׃
4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
אַחַ֤ת ׀ שָׁאַ֣לְתִּי מֵֽאֵת־יְהוָה֮ אוֹתָ֪הּ אֲבַ֫קֵּ֥שׁ שִׁבְתִּ֣י בְּבֵית־יְ֭הוָה כָּל־יְמֵ֣י חַיַּ֑י לַחֲז֥וֹת בְּנֹֽעַם־יְ֝הוָ֗ה וּלְבַקֵּ֥ר בְּהֵיכָלֽוֹ׃
5 ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು.
כִּ֤י יִצְפְּנֵ֨נִי ׀ בְּסֻכֹּה֮ בְּי֪וֹם רָ֫עָ֥ה יַ֭סְתִּרֵנִי בְּסֵ֣תֶר אָהֳל֑וֹ בְּ֝צ֗וּר יְרוֹמְמֵֽנִי׃
6 ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.
וְעַתָּ֨ה יָר֪וּם רֹאשִׁ֡י עַ֤ל אֹֽיְבַ֬י סְֽבִיבוֹתַ֗י וְאֶזְבְּחָ֣ה בְ֭אָהֳלוֹ זִבְחֵ֣י תְרוּעָ֑ה אָשִׁ֥ירָה וַ֝אֲזַמְּרָ֗ה לַיהוָֽה׃
7 ಯೆಹೋವನೇ, ನಿನಗೆ ಗಟ್ಟಿಯಾಗಿ ಮೊರೆಯಿಡುತ್ತೇನೆ; ನನ್ನನ್ನು ಕರುಣಿಸಿ, ಸದುತ್ತರವನ್ನು ದಯಪಾಲಿಸು.
שְׁמַע־יְהוָ֖ה קוֹלִ֥י אֶקְרָ֗א וְחָנֵּ֥נִי וַעֲנֵֽנִי׃
8 “ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು.
לְךָ֤ ׀ אָמַ֣ר לִ֭בִּי בַּקְּשׁ֣וּ פָנָ֑י אֶת־פָּנֶ֖יךָ יְהוָ֣ה אֲבַקֵּֽשׁ׃
9 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.
אַל־תַּסְתֵּ֬ר פָּנֶ֨יךָ ׀ מִמֶּנִּי֮ אַֽל־תַּט־בְּאַ֗ף עַ֫בְדֶּ֥ךָ עֶזְרָתִ֥י הָיִ֑יתָ אַֽל־תִּטְּשֵׁ֥נִי וְאַל־תַּֽ֝עַזְבֵ֗נִי אֱלֹהֵ֥י יִשְׁעִֽי׃
10 ೧೦ ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.
כִּי־אָבִ֣י וְאִמִּ֣י עֲזָב֑וּנִי וַֽיהוָ֣ה יַֽאַסְפֵֽנִי׃
11 ೧೧ ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.
ה֤וֹרֵ֥נִי יְהוָ֗ה דַּ֫רְכֶּ֥ךָ וּ֭נְחֵנִי בְּאֹ֣רַח מִישׁ֑וֹר לְ֝מַ֗עַן שׁוֹרְרָֽי׃
12 ೧೨ ಸುಳ್ಳುಸಾಕ್ಷಿಗಳೂ ಬೆದರಿಸುವವರೂ ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಇಂಥ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡ.
אַֽל־תִּ֭תְּנֵנִי בְּנֶ֣פֶשׁ צָרָ֑י כִּ֥י קָֽמוּ־בִ֥י עֵֽדֵי־שֶׁ֝֗קֶר וִיפֵ֥חַ חָמָֽס׃
13 ೧೩ ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.
לׅׄוּלֵׅׄ֗אׅׄ הֶ֭אֱמַנְתִּי לִרְא֥וֹת בְּֽטוּב־יְהוָ֗ה בְּאֶ֣רֶץ חַיִּֽים׃
14 ೧೪ ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
קַוֵּ֗ה אֶל־יְה֫וָ֥ה חֲ֭זַק וְיַאֲמֵ֣ץ לִבֶּ֑ךָ וְ֝קַוֵּ֗ה אֶל־יְהוָֽה׃

< ಕೀರ್ತನೆಗಳು 27 >