< ಕೀರ್ತನೆಗಳು 29 >
1 ೧ ದಾವೀದನ ಕೀರ್ತನೆ. ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.
Псалом Давидів. Віддайте Господеві, о сини Божі, віддайте Господеві славу й могутність!
2 ೨ ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.
Віддайте імені Господа славу, вклоніться Господеві в Його величному святилищі.
3 ೩ ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.
Голос Господа – над водами; Бог слави гримить, Господь – над водами могутніми.
4 ೪ ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.
Голос Господа сильний; Голос Господа величний.
5 ೫ ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.
Голос Господа ламає кедри, Господь ламає кедри Лівану.
6 ೬ ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.
Він змушує їх танцювати, як телят, а [гори] Ліван та Сиріон – немов молодого дикого бика.
7 ೭ ಯೆಹೋವನ ಗರ್ಜನೆಗೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.
Голос Господа викрешує язики полум’я.
8 ೮ ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ.
Голос Господа змушує тремтіти пустелю, Господь потрясає пустелю Кадеш.
9 ೯ ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ.
Голос Господа гне дуби й оголює ліси, а в Храмі Його всі вигукують: «Слава!»
10 ೧೦ ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.
Господь сидів над [водами] потопу; Господь як Цар сидітиме навіки!
11 ೧೧ ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.
Господь дає міць Своєму народові; Господь благословляє народ Свій миром.