< ಕೀರ್ತನೆಗಳು 30 >
1 ೧ ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು. ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.
宮をささげるときにうたったダビデの歌 主よ、わたしはあなたをあがめます。あなたはわたしを引きあげ、敵がわたしの事によって喜ぶのを、ゆるされなかったからです。
2 ೨ ಯೆಹೋವನೇ, ನನ್ನ ದೇವರೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದಿ.
わが神、主よ、わたしがあなたにむかって助けを叫び求めると、あなたはわたしをいやしてくださいました。
3 ೩ ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ. (Sheol )
主よ、あなたはわたしの魂を陰府からひきあげ、墓に下る者のうちから、わたしを生き返らせてくださいました。 (Sheol )
4 ೪ ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
主の聖徒よ、主をほめうたい、その聖なるみ名に感謝せよ。
5 ೫ ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
その怒りはただつかのまで、その恵みはいのちのかぎり長いからである。夜はよもすがら泣きかなしんでも、朝と共に喜びが来る。
6 ೬ ನಾನಂತೂ ಸುಖದಿಂದಿದ್ದಾಗ, “ನಾನು ಎಂದಿಗೂ ಕದಲುವುದಿಲ್ಲ” ಎಂದು ಹೇಳಿಕೊಂಡಿದ್ದೆನು.
わたしは安らかな時に言った、「わたしは決して動かされることはない」と。
7 ೭ ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.
主よ、あなた恵みをもって、わたしをゆるがない山のように堅くされました。あなたがみ顔をかくされたので、わたしはおじ惑いました。
8 ೮ ಯೆಹೋವನೇ, ನಿನಗೆ ಮೊರೆಯಿಟ್ಟೆನು; ನನ್ನ ಒಡೆಯನಿಗೆ ಬಿನ್ನವಿಸಿ,
主よ、わたしはあなたに呼ばわりました。ひたすら主に請い願いました、
9 ೯ “ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?
「わたしが墓に下るならば、わたしの死になんの益があるでしょうか。ちりはあなたをほめたたえるでしょうか。あなたのまことをのべ伝えるでしょうか。
10 ೧೦ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ಕರುಣಿಸು; ಯೆಹೋವನೇ, ನನ್ನ ಸಹಾಯಕ್ಕೆ ಬಾ” ಎಂದು ಹೇಳಿದೆನು.
主よ、聞いてください、わたしをあわれんでください。主よ、わたしの助けとなってください」と。
11 ೧೧ ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ.
あなたはわたしのために、嘆きを踊りにかえ、荒布を解き、喜びをわたしの帯とされました。
12 ೧೨ ಇದರಿಂದ ಯೆಹೋವನೇ, ನನ್ನ ಮನಸ್ಸು ಎಡೆಬಿಡದೆ ನಿನ್ನನ್ನು ಕೀರ್ತಿಸುತ್ತಿರುವುದು; ನನ್ನ ದೇವರೇ, ನಿನ್ನನ್ನು ಸದಾಕಾಲವೂ ಸ್ತುತಿಸುವೆನು.
これはわたしの魂があなたをほめたたえて、口をつぐむことのないためです。わが神、主よ、わたしはとこしえにあなたに感謝します。