< ಕೀರ್ತನೆಗಳು 31 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ; ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.
To the chief Musician, A Psalm of David. In thee, O LORD, do I put my trust; let me never be ashamed: deliver me in thy righteousness.
2 ೨ ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು; ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು.
Bow down thy ear to me; deliver me speedily: be thou my strong rock, for an house of defence to save me.
3 ೩ ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ; ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು.
For thou art my rock and my fortress; therefore for thy name’s sake lead me, and guide me.
4 ೪ ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆ ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು;
Pull me out of the net that they have laid secretly for me: for thou art my strength.
5 ೫ ನೀನೇ ನನಗೆ ಆಧಾರವಲ್ಲವೇ; ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ. ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.
Into thy hand I commit my spirit: thou hast redeemed me, O LORD God of truth.
6 ೬ ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.
I have hated them that regard lying vanities: but I trust in the LORD.
7 ೭ ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.
I will be glad and rejoice in thy mercy: for thou hast considered my trouble; thou hast known my soul in adversities;
8 ೮ ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕ ಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.
And hast not shut me up into the hand of the enemy: thou hast set my feet in a large place.
9 ೯ ಯೆಹೋವನೇ, ಕರುಣಿಸು; ಕಷ್ಟದಲ್ಲಿ ಬಿದ್ದಿದ್ದೇನೆ. ನನಗುಂಟಾದ ಬಾಧೆಯ ದೆಸೆಯಿಂದ ನನ್ನ ಕಣ್ಣು ಗುಡ್ಡೆ ಸೇದಿಹೋಗಿದೆ; ದೇಹಾತ್ಮಗಳು ಕುಗ್ಗಿಹೋದವು.
Have mercy upon me, O LORD, for I am in trouble: my eye is consumed with grief, yea, my soul and my body.
10 ೧೦ ನನ್ನ ಜೀವಮಾನವೆಲ್ಲಾ ದುಃಖದಲ್ಲಿಯೂ, ನಿಟ್ಟುಸಿರಿನಲ್ಲಿಯೂ ಕಳೆದುಹೋಗುತ್ತಾ ಇದೆ; ನನ್ನ ಸಂಕಟಗಳಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಸವೆದುಹೋಗಿವೆ.
For my life is spent with grief, and my years with sighing: my strength faileth because of my iniquity, and my bones are consumed.
11 ೧೧ ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.
I was a reproach among all my enemies, but especially among my neighbours, and a fear to my acquaintance: they that saw me without fled from me.
12 ೧೨ ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು; ಒಡೆದ ಬೋಕಿಯಂತಿದ್ದೇನೆ.
I am forgotten as a dead man out of mind: I am like a broken vessel.
13 ೧೩ ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.
For I have heard the slander of many: fear was on every side: while they took counsel together against me, they devised to take away my life.
14 ೧೪ ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.
But I trusted in thee, O LORD: I said, Thou art my God.
15 ೧೫ ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಂದ ನನ್ನನ್ನು ತಪ್ಪಿಸಿ ಕಾಪಾಡು.
My times are in thy hand: deliver me from the hand of my enemies, and from them that persecute me.
16 ೧೬ ನಿನ್ನ ಸೇವಕನನ್ನು ಪ್ರಸನ್ನಮುಖದಿಂದ ನೋಡು; ಪ್ರೀತಿಯಿಂದ ನನ್ನನ್ನು ರಕ್ಷಿಸು.
Make thy face to shine upon thy servant: save me for thy mercies’ sake.
17 ೧೭ ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ. (Sheol )
Let me not be ashamed, O LORD; for I have called upon thee: let the wicked be ashamed, and let them be silent in the grave. (Sheol )
18 ೧೮ ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.
Let the lying lips be put to silence; which speak grievous things proudly and contemptuously against the righteous.
19 ೧೯ ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.
O how great is thy goodness, which thou hast laid up for them that fear thee; which thou hast wrought for them that trust in thee before the sons of men!
20 ೨೦ ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.
Thou shalt hide them in the secret of thy presence from the pride of man: thou shalt keep them secretly in a pavilion from the strife of tongues.
21 ೨೧ ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ, ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ.
Blessed be the LORD: for he hath showed me his marvellous kindness in a strong city.
22 ೨೨ ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.
For I said in my haste, I am cut off from before thy eyes: nevertheless thou heardest the voice of my supplications when I cried to thee.
23 ೨೩ ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ.
O love the LORD, all ye his saints: for the LORD preserveth the faithful, and plentifully rewardeth the proud doer.
24 ೨೪ ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ; ನಿಮ್ಮ ಹೃದಯವು ಧೈರ್ಯದಿಂದಿರಲಿ.
Be of good courage, and he shall strengthen your heart, all ye that hope in the LORD.