< ಕೀರ್ತನೆಗಳು 32 >
1 ೧ ದಾವೀದನ ಪದ್ಯ. ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
Davudun maskili. Üsyankarlığı bağışlanan, Günahı əfv olunan insan Nə bəxtiyardır!
2 ೨ ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.
Rəbb tərəfindən təqsirkar sayılmayan, Qəlbində hiylə olmayan insan Nə bəxtiyardır!
3 ೩ ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
Etiraf etməyəndə Bütün gün nalə çəkməkdən Sümüklərim taqətdən düşdü.
4 ೪ ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. (ಸೆಲಾ)
Əlin üzərimdə gecə-gündüz ağırlaşdı, Sanki yayın quraqlığı məni taqətdən saldı. (Sela)
5 ೫ ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. (ಸೆಲಾ)
Sonra Sənə günahımı etiraf etdim, Təqsirlərimi gizlətmədim. Dedim: «Üsyankarlığımı Rəbbə etiraf edirəm». Təqsirimi, günahımı bağışladın. (Sela)
6 ೬ ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.
Buna görə hər bir mömin Səni tapan zaman Sənə dua etsin. Azğın sellər daşsa da, Möminə toxunmaz.
7 ೭ ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. (ಸೆಲಾ)
Sığınacaq yerim Sənsən, Məni dardan hifz edirsən. Zəfər harayı ilə Ətrafımda dövr edirsən. (Sela)
8 ೮ ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.
Dedin: «Sənə təlim verəcəyəm, Gedəcəyin yolu öyrədəcəyəm. Nəsihət verəcəyəm, Gözüm sənin üstündə olacaq.
9 ೯ ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.
At yaxud qatır kimi Şüursuz olmayın. Cilov, yüyən vurulmasa, Onlar idarə edilə bilməz».
10 ೧೦ ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.
Pislərin başına çox bəla gələr, Rəbbə güvənənlər isə hər tərəfdən məhəbbətə bürünər.
11 ೧೧ ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.
Ey salehlər, fərəhlənin, Rəbbə görə sevinin! Ey ürəyidüz olanlar, Onu mədh edin!