< ಕೀರ್ತನೆಗಳು 33 >

1 ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.
義人,你們要向上主踴躍歡呼,正直的人,理當讚美上主。
2 ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.
我們要彈琴,稱謝上主,彈奏十絃琴,讚頌上主。
3 ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.
我們應向上主高唱新歌,在歡呼之聲中奏琴吟詠,
4 ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ.
因為上主聖言是正直的,上主一切作為都忠實的;
5 ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.
上主愛護正義和公理,上主的慈愛瀰漫大地。
6 ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.
因上主的一句話,諸天造成;因上主的一口氣,萬象生成。
7 ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.
上主把海水好像裝在皮囊,上主將汪洋好像貯在池塘。
8 ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.
願整個大地敬愛上主,願普世居民敬愛上主,
9 ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
因為祂一發言,萬有造成,祂一出命,各物生成。
10 ೧೦ ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
上主使異邦的計畫無緒,使萬民的策略廢去。
11 ೧೧ ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
上主的計畫卻永恒不變,祂心中的謀挌萬世常傳。
12 ೧೨ ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.
尊上主為自天主的民族,真是有福!上主選為自己產業的百姓,真是有福!
13 ೧೩ ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;
上主由高天監臨,注視亞當的子孫;
14 ೧೪ ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.
上主由自己居處,視察大地的眾庶:
15 ೧೫ ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.
上主創造眾人的心靈,上主知曉人的一切言行。
16 ೧೬ ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.
帝王不是因兵多而取勝,勇士不是因力大而保命。
17 ೧೭ ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.
為獲勝利,駿馬乃是徒然,氣力雖大,依舊難獲安全。
18 ೧೮ ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
請看上主的眼睛常關注敬愛祂的人,祂的雙目常眷顧靠祂仁慈的人,
19 ೧೯ ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.
為使他們的性命,脫免死亡,為使他們在饑饉時,生活如常。
20 ೨೦ ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ.
我們的靈魂仰望上主,祂是我們的保障和扶助;
21 ೨೧ ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.
我們的心靈要因祂而喜樂歡暢,在祂的聖名內寄托我們的希望。
22 ೨೨ ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
上主,求你向我們廣施慈愛,有如我們對你所存的期待。

< ಕೀರ್ತನೆಗಳು 33 >