< ಕೀರ್ತನೆಗಳು 33 >
1 ೧ ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.
Веселіться, праведні, у Господі! Справедливим личить хвалити [Його].
2 ೨ ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.
Славте Господа під [звуки] арфи, співайте для Нього під ліру десятиструнну!
3 ೩ ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.
Співайте Йому нову пісню, грайте майстерно, зі звуком сурми!
4 ೪ ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ.
Бо Слово Господа справедливе і всі Його дії гідні довіри.
5 ೫ ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.
Він любить праведність і справедливість; земля повна милості Господньої.
6 ೬ ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.
Словом Господа створені небеса, і духом вуст Його – усе воїнство їхнє.
7 ೭ ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.
Він збирає грудами води моря, кладе безодні [океану] в сховища.
8 ೮ ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.
Нехай боїться Господа вся земля; нехай тремтять перед Ним усі мешканці всесвіту.
9 ೯ ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.
Бо Він сказав – і стало, Він заповів – і з’явилося.
10 ೧೦ ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
Господь руйнує намір народів, знищує задуми племен.
11 ೧೧ ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
А намір Господа стоятиме повіки, задуми Його серця – з роду в рід.
12 ೧೨ ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.
Блаженний народ, чиїм Богом є Господь, народ, який Він обрав Собі у спадок.
13 ೧೩ ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;
Господь поглядає з небес, бачить усіх синів людських.
14 ೧೪ ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.
Із місця Свого перебування приглядається пильно до всіх, хто живе на землі, –
15 ೧೫ ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.
Творець усіх сердець їхніх із розумінням вникає в усі їхні дії.
16 ೧೬ ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.
Царя не врятує численне військо, воїна не визволить велика сила.
17 ೧೭ ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.
Кінь ненадійний для порятунку: великою силою своєю він не врятує.
18 ೧೮ ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
Ось очі Господні звернені на тих, хто боїться Його, хто на милість Його сподівається,
19 ೧೯ ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.
щоб від смерті врятувати їх і живити під час голоду.
20 ೨೦ ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ.
Душа наша в надії чекає на Господа, Він – наша допомога і щит.
21 ೨೧ ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.
Ним радіє наше серце, бо на святе Його ім’я ми покладаємось.
22 ೨೨ ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
Нехай милість Твоя, Господи, буде над нами, як ми на Тебе й сподіваємося.