< ಕೀರ್ತನೆಗಳು 34 >

1 ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
Псалом Давида, когда он притворился безумным пред Авимелехом и был изгнан от него и удалился. Благословлю Господа во всякое время; хвала Ему непрестанно в устах моих.
2 ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು.
Господом будет хвалиться душа моя; услышат кроткие и возвеселятся.
3 ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
Величайте Господа со мною, и превознесем имя Его вместе.
4 ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
Я взыскал Господа, и Он услышал меня, и от всех опасностей моих избавил меня.
5 ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.
Кто обращал взор к Нему, те просвещались, и лица их не постыдятся.
6 ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.
Сей нищий воззвал, - и Господь услышал и спас его от всех бед его.
7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
Ангел Господень ополчается вокруг боящихся Его и избавляет их.
8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
Вкусите, и увидите, как благ Господь! Блажен человек, который уповает на Него!
9 ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
Бойтесь Господа, святые Его, ибо нет скудости у боящихся Его.
10 ೧೦ ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
Скимны бедствуют и терпят голод, а ищущие Господа не терпят нужды ни в каком благе.
11 ೧೧ ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.
Придите, дети, послушайте меня: страху Господню научу вас.
12 ೧೨ ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
Хочет ли человек жить и любит ли долгоденствие, чтобы видеть благо?
13 ೧೩ ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
Удерживай язык свой от зла и уста свои от коварных слов.
14 ೧೪ ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
Уклоняйся от зла и делай добро; ищи мира и следуй за ним.
15 ೧೫ ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
Очи Господни обращены на праведников, и уши Его - к воплю их.
16 ೧೬ ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
Но лице Господне против делающих зло, чтобы истребить с земли память о них.
17 ೧೭ ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
Взывают праведные, и Господь слышит, и от всех скорбей их избавляет их.
18 ೧೮ ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
Близок Господь к сокрушенным сердцем и смиренных духом спасет.
19 ೧೯ ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
Много скорбей у праведного, и от всех их избавит его Господь.
20 ೨೦ ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
Он хранит все кости его; ни одна из них не сокрушится.
21 ೨೧ ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.
Убьет грешника зло, и ненавидящие праведного погибнут.
22 ೨೨ ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.
Избавит Господь душу рабов Своих, и никто из уповающих на Него не погибнет.

< ಕೀರ್ತನೆಗಳು 34 >