< ಕೀರ್ತನೆಗಳು 34 >
1 ೧ ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
मैं हर वक़्त ख़ुदावन्द को मुबारक कहूँगा, उसकी सिताइश हमेशा मेरी ज़बान पर रहेगी।
2 ೨ ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು.
मेरी रूह ख़ुदावन्द पर फ़ख़्र करेगी; हलीम यह सुनकर ख़ुश होंगे।
3 ೩ ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ.
मेरे साथ ख़ुदावन्द की बड़ाई करो, हम मिलकर उसके नाम की तम्जीद करें।
4 ೪ ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
मैं ख़ुदावन्द का तालिब हुआ, उसने मुझे जवाब दिया, और मेरी सारी दहशत से मुझे रिहाई बख़्शी।
5 ೫ ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.
उन्होंने उसकी तरफ़ नज़र की और मुनव्वर हो गए; और उनके मुँह पर कभी शर्मिन्दगी न आएगी।
6 ೬ ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.
इस ग़रीब ने दुहाई दी, ख़ुदावन्द ने इसकी सुनी, और इसे इसके सब दुखों से बचा लिया।
7 ೭ ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
ख़ुदावन्द से डरने वालों के चारों तरफ़ उसका फ़रिश्ता ख़ेमाज़न होता है और उनको बचाता है।
8 ೮ ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.
आज़माकर देखो, कि ख़ुदावन्द कैसा मेहरबान है! वह आदमी जो उस पर भरोसा करता है।
9 ೯ ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ.
ख़ुदावन्द से डरो, ऐ उसके पाक लोगों! क्यूँकि जो उससे डरते हैं उनको कुछ कमी नहीं।
10 ೧೦ ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
बबर के बच्चे तो हाजतमंद और भूके होते हैं, लेकिन ख़ुदावन्द के तालिब किसी ने'मत के मोहताज न हाँगे।
11 ೧೧ ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.
ऐ बच्चो, आओ मेरी सुनो, मैं तुम्हें ख़ुदा से डरना सिखाऊँगा।
12 ೧೨ ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?
वह कौन आदमी है जो ज़िन्दगी का मुश्ताक़ है, और बड़ी उम्र चाहता है ताकि भलाई देखें?
13 ೧೩ ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.
अपनी ज़बान को बदी से बाज़ रख, और अपने होंटों को दग़ा की बात से।
14 ೧೪ ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
बुराई को छोड़ और नेकी कर; सुलह का तालिब हो और उसी की पैरवी कर।
15 ೧೫ ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
ख़ुदावन्द की निगाह सादिकों पर है, और उसके कान उनकी फ़रियाद पर लगे रहते हैं।
16 ೧೬ ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
ख़ुदावन्द का चेहरा बदकारों के ख़िलाफ़ है, ताकि उनकी याद ज़मीन पर से मिटा दे।
17 ೧೭ ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.
सादिक़ चिल्लाए, और ख़ुदावन्द ने सुना; और उनको उनके सब दुखों से छुड़ाया।
18 ೧೮ ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
ख़ुदावन्द शिकस्ता दिलों के नज़दीक है, और ख़स्ता ज़ानों को बचाता है।
19 ೧೯ ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.
सादिक की मुसीबतें बहुत हैं, लेकिन ख़ुदावन्द उसको उन सबसे रिहाई बख्शता है।
20 ೨೦ ಆತನು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.
वह उसकी सब हड्डियों को महफूज़ रखता है; उनमें से एक भी तोड़ी नहीं जाती।
21 ೨೧ ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.
बुराई शरीर को हलाक कर देगी; और सादिक़ से 'अदावत रखने वाले मुजरिम ठहरेंगे।
22 ೨೨ ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.
ख़ुदावन्द अपने बन्दों की जान का फ़िदिया देता है; और जो उस पर भरोसा करते हैं उनमें से कोई मुजरिम न ठहरेगा।