< ಕೀರ್ತನೆಗಳು 36 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆಹೋವನ ಸೇವಕನಾದ ದಾವೀದನ ಕೀರ್ತನೆ. ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.
耶和华的仆人大卫的诗,交与伶长。 恶人的罪过在他心里说: 我眼中不怕 神!
2 ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.
他自夸自媚, 以为他的罪孽终不显露,不被恨恶。
3 ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
他口中的言语尽是罪孽诡诈; 他与智慧善行已经断绝。
4 ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
他在床上图谋罪孽, 定意行不善的道,不憎恶恶事。
5 ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.
耶和华啊,你的慈爱上及诸天; 你的信实达到穹苍。
6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
你的公义好像高山; 你的判断如同深渊。 耶和华啊,人民、牲畜,你都救护。
7 ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
神啊,你的慈爱何其宝贵! 世人投靠在你翅膀的荫下。
8 ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.
他们必因你殿里的肥甘得以饱足; 你也必叫他们喝你乐河的水。
9 ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.
因为,在你那里有生命的源头; 在你的光中,我们必得见光。
10 ೧೦ ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.
愿你常施慈爱给认识你的人, 常以公义待心里正直的人。
11 ೧೧ ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು.
不容骄傲人的脚践踏我; 不容凶恶人的手赶逐我。
12 ೧೨ ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.
在那里,作孽的人已经仆倒; 他们被推倒,不能再起来。

< ಕೀರ್ತನೆಗಳು 36 >