< ಕೀರ್ತನೆಗಳು 36 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆಹೋವನ ಸೇವಕನಾದ ದಾವೀದನ ಕೀರ್ತನೆ. ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.
A karmesternek. Az Örökkévaló szolgájától, Dávidtól. Szózata van Bűnnek a gonoszhoz: úgy van szívemben – nincs Istentől való rettegés szemei előtt.
2 ೨ ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.
Mert simán bánt vele, úgy tetszik szemeiben, hogy megtalálja bűnét, a gyűlölni valót.
3 ೩ ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
Szája beszédei: jogtalanság és csalárdság, fölhagyott azzal, hogy eszes legyen, jót tegyen.
4 ೪ ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
Jogtalanságot gondol ki fekvőkelyén, odaáll a nem-jónak útjára, rosszat nem vet meg.
5 ೫ ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.
Örökkévaló, az égig ér a szereteted, hűséged a felhőkig:
6 ೬ ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
igazságod olyan mint az Isten hegyei, ítéleteid – a nagy mélység: embert és állatot megsegítsz, Örökkévaló!
7 ೭ ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
Mily drágalátos a te szereteted, oh Isten, s az emberfiak szárnyaid árnyékában találnak menedéket.
8 ೮ ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.
Megtelnek házad zsiradékával, és gyönyöreid patakját adod inniok.
9 ೯ ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.
Mert nálad van az élet kútfeje, a te világosságodban látunk világosságot.
10 ೧೦ ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.
Tartósan add szeretetedet megismerőidnek, és igazságodat az egyenes szívűeknek.
11 ೧೧ ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು.
Ne jőjjön rám a gőgnek lába, s a gonoszok keze ne tegyen bújdosóvá!
12 ೧೨ ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.
Ott elestek a jogtalanság cselekvői; eltaszíttattak s nem bírtak fölkelni.