< ಕೀರ್ತನೆಗಳು 37 >
1 ೧ ದಾವೀದನ ಕೀರ್ತನೆ. ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.
A psalm of David. Don't be upset over wicked people, or be jealous of those who do wrong.
2 ೨ ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.
For like grass, they will quickly dry up; like plants, they will soon wither away.
3 ೩ ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
Trust in the Lord, and do good. Live in the land and feed on faithfulness.
4 ೪ ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
Find your happiness in the Lord, and he will give you what you want the most.
5 ೫ ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.
Entrust all that you do to the Lord. Place your confidence in him and he will help you.
6 ೬ ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
He will make your vindication shine like a light, the rightness of your cause like the noonday sun.
7 ೭ ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
Be still in God's presence; wait patiently for him. Don't be upset over people who prosper when they carry out their evil schemes.
8 ೮ ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
Give up your anger! Let go your rage! Don't get mad—it only results in evil!
9 ೯ ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.
For the wicked will be destroyed, and those who trust in the Lord will take possession of the land.
10 ೧೦ ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.
In a little while the wicked will be no more—though you look for them you won't find them.
11 ೧೧ ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.
The humble will own the land; they will live there happily, in peace and prosperity.
12 ೧೨ ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.
The wicked plot evil against those who do good, gnashing their teeth at them.
13 ೧೩ ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.
But the Lord laughs at them, for he sees their coming day of judgment.
14 ೧೪ ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.
The wicked draw their swords, and bend their bows to destroy the poor and needy, to kill those who live right.
15 ೧೫ ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;
But the swords of the wicked will slice through their own hearts, and their bows will be broken.
16 ೧೬ ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.
It's better to do right and only have a little, than to be wicked and rich.
17 ೧೭ ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.
For the power of the wicked will be broken, but the Lord supports those who do right.
18 ೧೮ ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
The Lord knows what is happening to the innocent and grants them an eternal inheritance.
19 ೧೯ ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
They will not be humiliated in bad times; even in days of famine they will have plenty to eat.
20 ೨೦ ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.
But the wicked will die. The enemies of the Lord are like the flowers of the field—they will vanish like smoke.
21 ೨೧ ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
The wicked borrow, but don't repay; while those who do right give generously.
22 ೨೨ ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.
Those who are blessed by God will own the land, but those he curses will die.
23 ೨೩ ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
The Lord shows the right path to those who follow him, and is happy with the way they live.
24 ೨೪ ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.
Though they may trip up, they will not fall to the ground, for the Lord holds their hand.
25 ೨೫ ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
Once I was young, and now I've grown old, yet I've never seen those who do right abandoned, nor their children having to beg for bread.
26 ೨೬ ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.
They are always kind, and generous with their loans; their children are a blessing.
27 ೨೭ ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.
Reject evil, do what is good, and you will live forever in the land.
28 ೨೮ ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
For the Lord loves fairness and he will never abandon those who are trustworthy. He will protect them forever. But the children of the wicked will die.
29 ೨೯ ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.
Those who do right will own the land and will live there forever.
30 ೩೦ ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
People who do right give good advice, explaining what is fair.
31 ೩೧ ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ.
God's law lives in their minds, so they will not slip from his way.
32 ೩೨ ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.
The wicked lie in wait for those who do good, intending to kill them.
33 ೩೩ ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.
But the Lord will not let them fall into the hands of the wicked, and he will not let those who do good be condemned when they are put on trial.
34 ೩೪ ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
Trust in the Lord, and stay on his path. He will lift you up and give you the land to own. You will see when the wicked are destroyed.
35 ೩೫ ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.
I have watched the wicked acting brutally, spreading like a large tree in its native land.
36 ೩೬ ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.
But when I passed that way the next time, they were gone. I searched for them but couldn't find them.
37 ೩೭ ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.
Observe the innocent, look at those who do right! Those who love peace have a future!
38 ೩೮ ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.
But those who are rebellious will be altogether destroyed; the wicked have no future.
39 ೩೯ ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.
The Lord saves those who live right; he is their protection in times of trouble.
40 ೪೦ ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.
The Lord helps them and rescues them from the wicked. He saves them because they go to him for protection.