< ಕೀರ್ತನೆಗಳು 39 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದೂತೂನನ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಕೀರ್ತನೆ. “ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.
Niliamua, “Nitakuwa mwangalifu kwa kile nisemacho ili kwamba nisitende dhambi kwa ulimi wangu. Nitaufumba mdomo wangu niwapo uweponi mwa mtu mwovu.”
2 ೨ ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು.
Nilikaa kimya; Nilizuia maneno yangu hata kuongea lolote zuri, na maumivu yangu yalizidi sana.
3 ೩ ನನ್ನ ಹೃದಯವು ಆತಂಕದಿಂದ ಕೂಡಿತ್ತು; ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. ಆಗ ನಾನು ಬಾಯಿ ಬಿಟ್ಟು,
Moyo wangu ukawaka moto; nilipoyatafakari mambo haya, yaliniunguza kama moto. Ndipo mwishowe niliongea.
4 ೪ “ಯೆಹೋವನೇ, ನನಗೆ ಅವಸಾನವುಂಟೆಂದೂ, ನನ್ನ ಜೀವಮಾನವು ಅತ್ಯಲ್ಪವೆಂದೂ, ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.
Yahwe, unijulishe ni lini utakuwa mwisho wa maisha yangu na kiwango cha siku zangu. Unioneshe jinsi maisha yangu yalivyo mafupi.
5 ೫ ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. (ಸೆಲಾ)
Tazama, wewe umezifanya siku zangu kama upana wa kiganja changu tu, sikuzangu za kuishi ni kama si kitu mbele zako. Hakika kila mtu ana pumzi moja. (Selah)
6 ೬ ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.
Hakika kila mtu hutembea kama kivuli. Hakika kila mmoja hufanya haraka kuhusu kukusaya utajiri ingawa hawajui ni nani atazipokea.
7 ೭ “ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ.
Sasa, Bwana, ninasubiri kwa ajili ya nini? Wewe ni tumaini langu pekee.
8 ೮ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆಮಾಡು; ಮೂರ್ಖರ ನಿಂದೆಗೆ ಗುರಿಮಾಡಬೇಡ.
Uniokoe na dhambi zangu; usinifanye laumu ya wabumbavu.
9 ೯ ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.
Niko kimya na siwezi kufungua mdomo wangu, kwa sababu ni wewe ndiwe umefanya hivyo.
10 ೧೦ ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.
Acha kunijeruhi; nimezidiwa na pigo la mkono wako.
11 ೧೧ ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. (ಸೆಲಾ)
Wewe unapowaadhibu watu kwa ajili ya dhambi, huvila kama nondo vitu vyao wavitamanivyo; hakika watu si kitu bali mvuke. Serah
12 ೧೨ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.
Sikia maombi yangu, Yahwe, na unisikilize; usikie kilio changu! Usiwe kiziwi kwangu, kwa maana niko kama mgeni pamoja nawe, kimbilio langu la usalama kama mababu zangu walivyokuwa.
13 ೧೩ ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”
Geuzia furaha yako kwangu ili kwamba niweze kutabasamu kabla sijafa.