< ಕೀರ್ತನೆಗಳು 4 >
1 ೧ ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.
Ry Andrianañaharen-kavañonako toiño iraho te mikanjy Azo fa Ihe ty nañivake ho ahy te nalovilovy; isoho vaho janjiño o halalikoo.
2 ೨ ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? (ಸೆಲಾ)
O ry ana’ondatio, Sikala ‘mbia ro hafote’ areo ho inje ty asiko? ty hikoko ty tsy vente’e, hitsoeke ty famañahiañe? Selà
3 ೩ ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.
Fe fohino te navaha’ Iehovà ho ama’e i vañoñey; ho janjiñe’ Iehovà te kanjieko.
4 ೪ ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. (ಸೆಲಾ)
Minevenevera, le ko mandilatse; mañereñerea añ’arofo an-tihi’o eo, vaho mianjiña. Selà
5 ೫ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.
Mañengà soron-kavantañañe, vaho miatoa am’Iehovà.
6 ೬ “ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.
Maro ty mivola: Ia ty hampiboake hasoa amantika? Ry Iehovà, onjono ama’ay ty hazavan-dahara’o.
7 ೭ ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.
Ihe nampipoke haehake an-troko ao, mandikoatse te an-tsàm-pamokara’ iareo ampemba naho divay.
8 ೮ ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
Hàndre an-kanintsin-draho le hiroro amy te Ihe avao ry Iehovà ro mampimoneñe ahy am-pitsolohañe.