< ಕೀರ್ತನೆಗಳು 4 >

1 ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.
В конец, в песнех, Псалом Давиду. Внегда призвати ми, услыша мя Бог правды моея: в скорби распространил мя еси: ущедри мя и услыши молитву мою.
2 ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? (ಸೆಲಾ)
Сынове человечестии, доколе тяжкосердии? Вскую любите суету и ищете лжи?
3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.
И уведите, яко удиви Господь преподобнаго Своего. Господь услышит мя, внегда воззвати ми к Нему.
4 ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. (ಸೆಲಾ)
Гневайтеся, и не согрешайте, яже глаголете в сердцах ваших, на ложах ваших умилитеся:
5 ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.
пожрите жертву правды и уповайте на Господа.
6 “ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.
Мнози глаголют: кто явит нам благая? Знаменася на нас свет лица Твоего, Господи.
7 ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.
Дал еси веселие в сердцы моем: от плода пшеницы, вина и елеа своего умножишася:
8 ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.
в мире вкупе усну и почию, яко Ты, Господи, единаго на уповании вселил мя еси.

< ಕೀರ್ತನೆಗಳು 4 >