< ಕೀರ್ತನೆಗಳು 40 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.
לַ֝מְנַצֵּ֗חַ לְדָוִ֥ד מִזְמֽוֹר׃ קַוֹּ֣ה קִוִּ֣יתִי יְהוָ֑ה וַיֵּ֥ט אֵ֝לַ֗י וַיִּשְׁמַ֥ע שַׁוְעָתִֽי׃
2 ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
וַיַּעֲלֵ֤נִי ׀ מִבּ֥וֹר שָׁאוֹן֮ מִטִּ֪יט הַיָּ֫וֵ֥ן וַיָּ֖קֶם עַל־סֶ֥לַע רַגְלַ֗י כּוֹנֵ֥ן אֲשֻׁרָֽי׃
3 ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.
וַיִּתֵּ֬ן בְּפִ֨י ׀ שִׁ֥יר חָדָשׁ֮ תְּהִלָּ֪ה לֵֽאלֹ֫הֵ֥ינוּ יִרְא֣וּ רַבִּ֣ים וְיִירָ֑אוּ וְ֝יִבְטְח֗וּ בַּיהוָֽה׃
4 ಯಾರು ಅಹಂಕಾರಿಗಳ ಜೊತೆಯಲ್ಲಿಯೂ, ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.
אַ֥שְֽׁרֵי הַגֶּ֗בֶר אֲשֶׁר־שָׂ֣ם יְ֭הֹוָה מִבְטַח֑וֹ וְֽלֹא־פָנָ֥ה אֶל־רְ֝הָבִ֗ים וְשָׂטֵ֥י כָזָֽב׃
5 ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.
רַבּ֤וֹת עָשִׂ֨יתָ ׀ אַתָּ֤ה ׀ יְהוָ֣ה אֱלֹהַי֮ נִֽפְלְאֹתֶ֥יךָ וּמַחְשְׁבֹתֶ֗יךָ אֵ֫לֵ֥ינוּ אֵ֤ין ׀ עֲרֹ֬ךְ אֵלֶ֗יךָ אַגִּ֥ידָה וַאֲדַבֵּ֑רָה עָ֝צְמ֗וּ מִסַּפֵּֽר׃
6 ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
זֶ֤בַח וּמִנְחָ֨ה ׀ לֹֽא־חָפַ֗צְתָּ אָ֭זְנַיִם כָּרִ֣יתָ לִּ֑י עוֹלָ֥ה וַ֝חֲטָאָ֗ה לֹ֣א שָׁאָֽלְתָּ׃
7 ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.
אָ֣ז אָ֭מַרְתִּי הִנֵּה־בָ֑אתִי בִּמְגִלַּת־סֵ֝֗פֶר כָּת֥וּב עָלָֽי׃
8 ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.
לַֽעֲשֽׂוֹת־רְצוֹנְךָ֣ אֱלֹהַ֣י חָפָ֑צְתִּי וְ֝ת֥וֹרָתְךָ֗ בְּת֣וֹךְ מֵעָֽי׃
9 ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.
בִּשַּׂ֤רְתִּי צֶ֨דֶק ׀ בְּקָ֘הָ֤ל רָ֗ב הִנֵּ֣ה שְׂ֭פָתַי לֹ֣א אֶכְלָ֑א יְ֝הוָ֗ה אַתָּ֥ה יָדָֽעְתָּ׃
10 ೧೦ ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
צִדְקָתְךָ֬ לֹא־כִסִּ֨יתִי ׀ בְּת֬וֹךְ לִבִּ֗י אֱמוּנָתְךָ֣ וּתְשׁוּעָתְךָ֣ אָמָ֑רְתִּי לֹא־כִחַ֥דְתִּי חַסְדְּךָ֥ וַ֝אֲמִתְּךָ֗ לְקָהָ֥ל רָֽב׃
11 ೧೧ ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
אַתָּ֤ה יְהוָ֗ה לֹא־תִכְלָ֣א רַחֲמֶ֣יךָ מִמֶּ֑נִּי חַסְדְּךָ֥ וַ֝אֲמִתְּךָ֗ תָּמִ֥יד יִצְּרֽוּנִי׃
12 ೧೨ ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.
כִּ֤י אָפְפ֥וּ־עָלַ֨י ׀ רָע֡וֹת עַד־אֵ֬ין מִסְפָּ֗ר הִשִּׂיג֣וּנִי עֲ֭וֹנֹתַי וְלֹא־יָכֹ֣לְתִּי לִרְא֑וֹת עָצְמ֥וּ מִשַּֽׂעֲר֥וֹת רֹ֝אשִׁ֗י וְלִבִּ֥י עֲזָבָֽנִי׃
13 ೧೩ ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; ಯೆಹೋವನೇ, ಬೇಗನೆ ಬಂದು ಸಹಾಯಮಾಡು.
רְצֵ֣ה יְ֭הוָה לְהַצִּילֵ֑נִי יְ֝הוָ֗ה לְעֶזְרָ֥תִי חֽוּשָׁה׃
14 ೧೪ ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.
יֵ֘בֹ֤שׁוּ וְיַחְפְּר֨וּ ׀ יַחַד֮ מְבַקְשֵׁ֥י נַפְשִׁ֗י לִסְפּ֫וֹתָ֥הּ יִסֹּ֣גוּ אָ֭חוֹר וְיִכָּלְמ֑וּ חֲ֝פֵצֵ֗י רָעָתִֽי׃
15 ೧೫ ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ.
יָ֭שֹׁמּוּ עַל־עֵ֣קֶב בָּשְׁתָּ֑ם הָאֹמְרִ֥ים לִ֝֗י הֶ֘אָ֥ח ׀ הֶאָֽח׃
16 ೧೬ ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ.
יָ֘שִׂ֤ישׂוּ וְיִשְׂמְח֨וּ ׀ בְּךָ֗ כָּֽל־מְבַ֫קְשֶׁ֥יךָ יֹאמְר֣וּ תָ֭מִיד יִגְדַּ֣ל יְהוָ֑ה אֹֽ֝הֲבֵ֗י תְּשׁוּעָתֶֽךָ׃
17 ೧೭ ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
וַאֲנִ֤י ׀ עָנִ֣י וְאֶבְיוֹן֮ אֲדֹנָ֪י יַחֲשָׁ֫ב לִ֥י עֶזְרָתִ֣י וּמְפַלְטִ֣י אַ֑תָּה אֱ֝לֹהַ֗י אַל־תְּאַחַֽר׃

< ಕೀರ್ತನೆಗಳು 40 >