< ಕೀರ್ತನೆಗಳು 40 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.
我たへしのびてヱホバを俟望みたり ヱホバ我にむかひてわが號呼をききたまへり
2 ೨ ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.
また我をほろびの阱より泥のなかよりとりいだしてわが足を磐のうへにおきわが歩をかたくしたまへり
3 ೩ ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.
ヱホバはあたらしき歌をわが口にいれたまへり此はわれらの神にささぐる讃美なり おほくの人はこれを見ておそれ かつヱホバによりたのまん
4 ೪ ಯಾರು ಅಹಂಕಾರಿಗಳ ಜೊತೆಯಲ್ಲಿಯೂ, ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ, ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.
ヱホバをおのが賴となし高るものによらず虚偽にかたぶく者によらざる人はさいはひなり
5 ೫ ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.
わが神ヱホバよなんぢの作たまへる奇しき迹と われらにむかふ念とは甚おほくして汝のみまへにつらねいふことあたはず 我これをいひのべんとすれどその數かぞふることあたはず
6 ೬ ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.
なんぢ犠牲と祭物とをよろこびたまはず汝わが耳をひらきたまへり なんぢ燔祭と罪祭とをもとめたまはず
7 ೭ ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ.
そのとき我いへらく 觀よわれきたらんわがことを書の巻にしるしたり
8 ೮ ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.
わが神よわれは聖意にしたがふことを樂む なんぢの法はわが心のうちにありと
9 ೯ ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.
われ大なる會にて義をつげしめせり 視よわれ口唇をとぢず ヱホバよなんぢ之をしりたまふ
10 ೧೦ ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
われなんぢの義をわが心のうちにひめおかず なんぢの眞實となんぢの拯救とをのべつたへたり 我なんぢの仁慈となんぢの眞理とをおほいなる會にかくさざりき
11 ೧೧ ಯೆಹೋವನೇ, ನೀನಂತೂ ನಿನ್ನ ಕರುಣೆಯನ್ನು ನನ್ನಿಂದ ಅಗಲಿಸಬೇಡ; ನಿನ್ನ ಕೃಪಾಸತ್ಯತೆಗಳು ನನ್ನನ್ನು ಯಾವಾಗಲೂ ಕಾಪಾಡಲಿ.
ヱホバよなんぢ憐憫をわれにをしみたまふなかれ 仁慈と眞理とをもて恒にわれをまもりたまへ
12 ೧೨ ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.
そはかぞへがたき禍害われをかこみ わが不義われに追及てあふぎみること能はぬまでになりぬ その多きことわが首の髮にもまさり わが心きえうするばかりなればなり
13 ೧೩ ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; ಯೆಹೋವನೇ, ಬೇಗನೆ ಬಂದು ಸಹಾಯಮಾಡು.
ヱホバよ願くはわれをすくひたまへ ヱホバよ急ぎきたりて我をたすけたまへ
14 ೧೪ ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.
願くはわが霊魂をたづねほろぼさんとするものの皆はぢあわてんことを わが害はるるをよろこぶもののみな後にしりぞきて恥をおはんことを
15 ೧೫ ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ.
われにむかひて ああ視よや視よやといふ者おのが恥によりておどろきおそれんことを
16 ೧೬ ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ.
願くはなんぢを尋求むるものの皆なんぢによりて樂みよろこばんことを なんぢの救をしたふものの恒にヱホバは大なるかなととなへんことを
17 ೧೭ ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
われはくるしみ且ともし 主われをねんごろに念ひたまふ なんぢはわが助なり われをすくひたまふ者なり ああわが神よねがはくはためらひたまふなかれ