< ಕೀರ್ತನೆಗಳು 41 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.
मुबारक, है वह जो ग़रीब का ख़याल रखता है ख़ुदावन्द मुसीबत के दिन उसे छुड़ाएगा।
2 ೨ ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
ख़ुदावन्द उसे महफू़ज़ और ज़िन्दा रख्खेगा, और वह ज़मीन पर मुबारक होगा। तू उसे उसके दुश्मनों की मर्ज़ी पर न छोड़।
3 ೩ ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.
ख़ुदावन्द उसे बीमारी के बिस्तर पर संभालेगा; तू उसकी बीमारी में उसके पूरे बिस्तर को ठीक करता है।
4 ೪ ನಾನಂತೂ, “ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು” ಅಂದೆನು.
मैंने कहा, “ऐ ख़ुदावन्द, मुझ पर रहम कर! मेरी जान को शिफ़ा दे, क्यूँकि मैं तेरा गुनहगार हूँ।”
5 ೫ ನನ್ನ ಹಾನಿಯನ್ನು ಅಪೇಕ್ಷಿಸುವ ಶತ್ರುಗಳು, “ಅವನು ಯಾವಾಗ ಸತ್ತಾನು? ಅವನ ಹೆಸರು ಯಾವಾಗ ಇಲ್ಲದೆ ಹೋದೀತು?” ಎಂದು ಹೇಳಿಕೊಳ್ಳುತ್ತಾರೆ.
मेरे दुश्मन यह कहकर मेरी बुराई करते हैं, कि वह कब मरेगा और उसका नाम कब मिटेगा?
6 ೬ ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
जब वह मुझ से मिलने को आता है, तो झूटी बातें बकता है; उसका दिल अपने अन्दर बदी समेटता है; वह बाहर जाकर उसी का ज़िक्र करता है।
7 ೭ ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.
मुझ से 'अदावत रखने वाले सब मिलकर मेरी ग़ीबत करते हैं; वह मेरे ख़िलाफ़ मेरे नुक़सान के मन्सूबे बाँधते हैं।
8 ೮ “ಅವನನ್ನು ಅಸಾಧ್ಯರೋಗ ಹಿಡಿದಿದೆ; ಅವನು ಹಾಸಿಗೆಯನ್ನು ಬಿಟ್ಟು ತಿರುಗಿ ಏಳುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.
वह कहते हैं, “इसे तो बुरा रोग लग गया है; अब जो वह पड़ा है तो फिर उठने का नहीं।”
9 ೯ ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.
बल्कि मेरे दिली दोस्त ने जिस पर मुझे भरोसा था, और जो मेरी रोटी खाता था, मुझ पर लात उठाई है।
10 ೧೦ ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.
लेकिन तू ऐ ख़ुदावन्द! मुझ पर रहम करके मुझे उठा खड़ा कर, ताकि मैं उनको बदला दूँ।
11 ೧೧ ಶತ್ರುಗಳ ಜಯಧ್ವನಿ ಇಲ್ಲದ್ದರಿಂದಲೇ ನಿನ್ನ ಒಲುಮೆ ನನಗುಂಟೆಂದು ತಿಳಿದುಕೊಳ್ಳುವೆನು.
इससे मैं जान गया कि तू मुझ से ख़ुश है, कि मेरा दुश्मन मुझ पर फ़तह नहीं पाता।
12 ೧೨ ನಿರ್ದೋಷಿಯಾದ ನನ್ನನ್ನಾದರೋ ನೀನು ಉದ್ಧಾರಮಾಡಿ, ನಿನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ನಿಲ್ಲಿಸುವಿ.
मुझे तो तू ही मेरी रास्ती में क़याम बख्शता है और मुझे हमेशा अपने सामने क़ाईम रखता है।
13 ೧೩ ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.
ख़ुदावन्द इस्राईल का ख़ुदा, इब्तिदा से हमेशा तक मुबारक हो! आमीन, सुम्म आमीन।