< ಕೀರ್ತನೆಗಳು 42 >

1 ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.
BOOK SECOND: “To the chief musician, a Maskil, for the sons of Korach.” As a hart panteth after brooks of water, so panteth my soul after thee, O God.
2 ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?
My soul thirsteth for God, for the living God: when shall I go [again] and be seen in the presence of God?
3 “ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.
My tears have been my food day and night; because men say unto me all the day, Where is thy God?
4 ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.
These things will I remember, and pour out my soul in me: how I was wont to pass along amidst the multitude, journeying with them as a pilgrim to the house of God, with the voice of joyful song and thanksgiving, among the festive throng.
5 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
Why art thou cast down, O my soul, and disquieted in me? Hope thou in God; for I shall yet thank him, because of the salvation of his countenance.
6 ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.
O my God, my soul is cast down within me: therefore will I remember thee from the land of the Jordan, and from the peaks of Chermon, from the low mount.
7 ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.
Deep calleth unto deep at the noise of thy waterfalls: all thy waves and thy billows have passed over me.
8 ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.
In the daytime the Lord will command his kindness, and in the night his song shall be with me, as a prayer unto the God of my life.
9 ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು.
I will say unto God, my rock, why hast thou forgotten me? why must I walk grieved, under the oppression of the enemy?
10 ೧೦ ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.
It is as death in my bones, when my assailants reproach me; when they say unto me all the day, Where is thy God?
11 ೧೧ ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
Why art thou cast down, O my soul? and why art thou disquieted within met? Hope thou in God; for I shall yet thank him, the salvation of my countenance, and my God.

< ಕೀರ್ತನೆಗಳು 42 >