< ಕೀರ್ತನೆಗಳು 42 >
1 ೧ ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.
Керівнику хору. Повчання синів Кореєвих. Як олень лине до потоків води, так душа моя лине до Тебе, Боже.
2 ೨ ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?
Душа моя спрагла Бога, живого Бога. Коли ж прийду я й постану перед Богом?
3 ೩ “ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.
Сльози мої були для мене хлібом вдень і вночі, коли говорили мені щодня: «Де твій Бог?»
4 ೪ ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.
Ось про що я згадую, і виливається [від туги] душа моя: коли проходив я у велелюдній ході, підступаючи до дому Божого із вигуками радості й слави серед святкового натовпу.
5 ೫ ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
Чому ти сумуєш, душе моя, і чому журишся в мені? Сподівайся на Бога, адже я ще прославлятиму Його – мого Спасителя!
6 ೬ ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.
Боже мій, за Тобою сумує душа моя, тому я згадую про Тебе із землі Йордану, із висот Хермону, з гори Міцар.
7 ೭ ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.
Безодня до безодні кличе шумом Твоїх водоспадів; усі Твої буруни та хвилі пройшли наді мною.
8 ೮ ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.
Удень заповість Господь Своїй милості [прийти до мене], а вночі у мене [лине] Йому пісня, молитва Богові мого життя.
9 ೯ ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು.
Скажу-но я Богові, скелі моїй: «Чому Ти забув мене? Чому я ходжу понуро, пригнічений ворогом?»
10 ೧೦ ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.
У кістках моїх – виснаження; глузують з мене мої супротивники, щодня промовляючи до мене: «Де твій Бог?»
11 ೧೧ ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
Чому ти сумуєш, душе моя, і чому журишся в мені? Сподівайся на Бога, адже я ще прославлятиму Його – Спасителя мого й Бога мого.