< ಕೀರ್ತನೆಗಳು 43 >
1 ೧ ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.
O God, fahkak lah wangin mwetik, Ac kasreyu ke sripa su mwet ma tia etu God elos lainyu kac; Moliyula liki mwet kikiap ac mwet koluk.
2 ೨ ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಏಕೆ ನನ್ನನ್ನು ತಳ್ಳಿಬಿಟ್ಟೆ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?
Kom pa God su langoeyula; Efu kom ku sisyula? Efu ku nga in keok na Ke sulallal lun mwet lokoalok luk?
3 ೩ ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ.
Supwama kalem lom ac pwaye lom; Lela tuh in mwe kolyu Ac folokinyume nu Zion, fineol mutal sum, Ac nu in Tempul lom yen kom muta we.
4 ೪ ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.
Na nga ac fah som nu ke loang lom, O God; Tuh engan luk tuku sum me. Nga ac fah srital ke harp nutik ac on in kaksakin kom, O God, God luk.
5 ೫ ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
Efu ku nga arulana supwar? Efu ku nga arulana fohs? Nga ac filiya finsrak luk in God, Ac nga fah sifilpa kaksakunul, Mwet Lango luk ac God luk.