< ಕೀರ್ತನೆಗಳು 44 >
1 ೧ ಪ್ರಧಾನಗಾಯಕನ ಕೀರ್ತನಸಂಹಗ್ರದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.
В конец, сынов Кореовых, в разум, псалом. Боже, ушима нашима услышахом, и отцы наши возвестиша нам дело, еже соделал еси во днех их, во днех древних.
2 ೨ ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
Рука Твоя языки потреби, и насадил я еси: озлобил еси люди и изгнал еси я.
3 ೩ ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
Не бо мечем своим наследиша землю, и мышца их не спасе их, но десница Твоя и мышца Твоя и просвещение лица Твоего, яко благоволил еси в них.
4 ೪ ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.
Ты еси сам Царь мой и Бог мой, заповедаяй спасения Иаковля.
5 ೫ ನಿನ್ನ ಸಹಾಯದಿಂದಲೇ ವೈರಿಗಳನ್ನು ಕೆಡವಿಬಿಡುವೆವು; ನಿನ್ನ ನಾಮಧೇಯದ ಬಲದಿಂದ ಎದುರಾಳಿಗಳನ್ನು ತುಳಿದುಬಿಡುವೆವು.
О Тебе враги нашя избодем роги, и о имени Твоем уничижим востающыя на ны.
6 ೬ ನಾನು ನನ್ನ ಬಿಲ್ಲಿನಲ್ಲಿ ಭರವಸವಿಡುವುದಿಲ್ಲ; ಇಲ್ಲವೇ ನನ್ನ ಕತ್ತಿಯು ನನ್ನನ್ನು ರಕ್ಷಿಸಲಾರದು.
Не на лук бо мой уповаю, и мечь мой не спасет мене:
7 ೭ ಹಿಂಸಕರಿಂದ ಬಿಡಿಸಿದವನು ನೀನೇ; ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಾತನು ನೀನೇ.
спасл бо еси нас от стужающих нам, и ненавидящих нас посрамил еси.
8 ೮ ದೇವರೇ, ನಿನ್ನಲ್ಲಿಯೇ ಯಾವಾಗಲೂ ಹಿಗ್ಗುತ್ತಿದ್ದೇವೆ; ನಿನ್ನ ನಾಮವನ್ನೇ ಸದಾಕಾಲವೂ ಕೀರ್ತಿಸುವೆವು.
О Бозе похвалимся весь день, и о имени Твоем исповемыся во век.
9 ೯ ಆದರೆ ಈಗ ನೀನು ನಮ್ಮನು ಕೈಬಿಟ್ಟಿದ್ದೀ, ಅವಮಾನಪಡಿಸಿದಿ; ನಮ್ಮ ಸೈನ್ಯಗಳ ಸಂಗಡ ನೀನು ಹೋಗಲಿಲ್ಲ.
Ныне же отринул еси и посрамил еси нас, и не изыдеши, Боже, в силах наших.
10 ೧೦ ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ.
Возвратил еси нас вспять при вразех наших, и ненавидящии нас расхищаху себе.
11 ೧೧ ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.
Дал еси нас яко овцы снеди, и во языцех разсеял ны еси.
12 ೧೨ ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.
Отдал еси люди Твоя без цены, и не бе множество в восклицаниих наших.
13 ೧೩ ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದಿ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ, ಕುಚೋದ್ಯಕ್ಕೂ ಒಳಪಡಿಸಿದಿ.
Положил еси нас поношение соседом нашым, подражнение и поругание сущым окрест нас.
14 ೧೪ ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದಮಾಡಿದಿ; ಅವರು ನಮ್ಮನ್ನು ನೋಡಿ ತಲೆಯಾಡಿಸುತ್ತಾರೆ.
Положил еси нас в притчу во языцех, покиванию главы в людех.
15 ೧೫ ದೂಷಕರ ನಿಂದಾವಚನಗಳಿಂದಲೂ, ಮುಯ್ಯಿತೀರಿಸುವ ವೈರಿಗಳ ದೃಷ್ಟಿಯಿಂದಲೂ,
Весь день срам мой предо мною есть, и студ лица моего покры мя,
16 ೧೬ ನನಗೆ ಉಂಟಾಗಿರುವ ಅವಮಾನವು ಯಾವಾಗಲೂ ನನ್ನ ಮುಂದೆ ಇದೆ; ನಾಚಿಕೆಯು ನನ್ನ ಮುಖವನ್ನು ಮುಚ್ಚಿದೆ.
от гласа поношающаго и оклеветающаго, от лица вражия и изгонящаго.
17 ೧೭ ನಾವು ನಿನ್ನನ್ನು ಮರೆಯದೆಯೂ, ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ; ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!
Сия вся приидоша на ны, и не забыхом Тебе, и не неправдовахом в завете Твоем,
18 ೧೮ ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ದಾರಿಯಿಂದ ತೊಲಗಲಿಲ್ಲ.
и не отступи вспять сердце наше: и уклонил еси стези нашя от пути Твоего,
19 ೧೯ ಆದರೂ ನೀನು ನಮ್ಮನ್ನು ಅಪಜಯಪಡಿಸಿ ನರಿಗಳಿರುವ ಕಾಡನ್ನಾಗಿ ಮಾಡಿದ್ದೇಕೆ? ಮರಣದ ನೆರಳು ನಮ್ಮನ್ನು ಕವಿಯುವಂತೆ ಮಾಡಿದ್ದೇಕೆ?
яко смирил еси нас на месте озлобления, и прикры ны сень смертная.
20 ೨೦ ನಾವು ನಮ್ಮ ದೇವರ ಹೆಸರನ್ನು ಮರೆತು, ಅನ್ಯದೇವತೆಗಳಿಗೆ ಕೈಯೆತ್ತಿದ್ದರೆ,
Аще забыхом имя Бога нашего, и аще воздехом руки нашя к богу чуждему,
21 ೨೧ ಹೃದಯದ ರಹಸ್ಯಗಳನ್ನು ಬಲ್ಲವನಾದ ದೇವರು, ವಿಚಾರಿಸುತ್ತಿರಲಿಲ್ಲವೋ?
не Бог ли взыщет сих? Той бо весть тайная сердца.
22 ೨೨ ದೇವರೇ, ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಜನರು ನಮ್ಮನ್ನು ಕೊಯ್ಗುರಿಗಳಂತೆ ಎಣಿಸಿದ್ದಾರೆ.
Зане Тебе ради умерщвляемся весь день, вменихомся яко овцы заколения.
23 ೨೩ ಕರ್ತನೇ, ಏಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡ.
Востани, вскую спиши, Господи? Воскресени, и не отрини до конца.
24 ೨೪ ಏಕೆ ವಿಮುಖನಾಗಿದ್ದಿ? ನಮಗಿರುವ ಬಾಧೆಗಳನ್ನೂ, ಹಿಂಸೆಗಳನ್ನೂ ಏಕೆ ಲಕ್ಷಿಸುವುದಿಲ್ಲ?
Вскую лице Твое отвращаеши? Забываеши нищету нашу и скорбь нашу?
25 ೨೫ ನಮ್ಮ ಪ್ರಾಣವು ಧೂಳಿನವರೆಗೂ ಬಗ್ಗಿಹೋಗಿದೆ; ನಮ್ಮ ಶರೀರವು ನೆಲಕ್ಕೆ ಅಂಟಿಕೊಂಡಿದೆ.
Яко смирися в персть душа наша, прильпе земли утроба наша.
26 ೨೬ ಎದ್ದು ಬಂದು ಸಹಾಯಮಾಡು; ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಗಾಗಿ ನಮ್ಮನ್ನು ವಿಮೋಚಿಸು.
Воскресени, Господи, помози нам, и избави нас имене ради Твоего.