< ಕೀರ್ತನೆಗಳು 45 >
1 ೧ ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ. ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.
Voor muziekbegeleiding; op de wijze van: "Leliën" Van de zonen van Kore; een minnelied. Een heerlijk lied ontwelt aan mijn hart, Ik wil den Koning mijn zang doen horen; Mijn tong is als een vlotte pen:
2 ೨ ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.
Gij zijt de schoonste onder de kinderen der mensen, Aanminnigheid ligt op uw lippen, Zo heeft God U voor eeuwig gezegend.
3 ೩ ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.
Gord uw zwaard om de heupen, o held, Omkleed U met glorie en luister;
4 ೪ ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.
Vol moed op uw ros voor waarheid, onschuld en recht! Uw rechterhand lere U machtige daden;
5 ೫ ನಿನ್ನ ಬಾಣಗಳು ಮಹಾತೀಕ್ಷ್ಣವಾಗಿರುವವು; ಅವು ರಾಜನ ಶತ್ರುಗಳ ಎದೆಯನ್ನು ಭೇದಿಸುವವು; ಶತ್ರುಜನಾಂಗಗಳು ನಿನ್ನ ಪಾದದ ಕೆಳಗೆ ಬೀಳುವವು.
Scherp zijn uw pijlen: volkeren liggen onder uw voet, ‘s Konings vijanden ontzinkt de moed!
6 ೬ ದೇವರು ನಿನಗೆ ಕೊಟ್ಟಿರುವ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನಿನ್ನ ರಾಜದಂಡವು ನ್ಯಾಯ ದಂಡವಾಗಿದೆ.
Uw troon staat vast in de eeuwen der eeuwen, Uw koningsschepter is een schepter van recht;
7 ೭ ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.
Gij hebt de gerechtigheid lief, maar haat de boosheid. Daarom heeft Jahweh, uw God, U gezalfd Met vreugde-olie als geen uwer broeders;
8 ೮ ನಿನ್ನ ವಸ್ತ್ರಗಳೆಲ್ಲಾ ರಕ್ತಬೋಳ, ದಾಲ್ಚಿನ್ನಿ, ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತ ಅರಮನೆಗಳೊಳಗೆ ಉತ್ಕೃಷ್ಟವಾದ ವಾದ್ಯಗಳು ನಿನ್ನನ್ನು ಆನಂದಗೊಳಿಸುತ್ತವೆ.
Al uw kleren geuren van mirre, aloë en laurier. Uit ivoren paleizen juichen de harpen U toe,
9 ೯ ನಿನ್ನ ಸ್ತ್ರೀಪರಿವಾರದಲ್ಲಿ ರಾಜಕುಮಾರಿಯರೂ ಇದ್ದಾರೆ; ಪಟ್ಟದ ರಾಣಿಯು ಓಫೀರ್ ದೇಶದ ಬಂಗಾರದ ಆಭರಣಗಳಿಂದ ಅಲಂಕೃತಳಾಗಿ, ನಿನ್ನ ಬಲಭಾಗದಲ್ಲಿ ನಿಂತಿರುವಳು.
Koningsdochters staan onder uw schonen; Daar treedt de Koningin aan uw rechter in ofir-brocaat!
10 ೧೦ ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.
Hoor, Dochter! Zie, en neig uw oor, Vergeet uw volk en het huis van uw vader:
11 ೧೧ ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು.
Laat de Koning uw schoonheid begeren; Breng Hem uw hulde, want Hij is uw Heer!
12 ೧೨ ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.
Dan komt de dochter van Tyrus tot U met geschenken, En zoeken de rijkste volken uw gunst.
13 ೧೩ ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.
Enkel lieftalligheid ligt op het gelaat der koninklijke Dochter, Met goud doorweven is haar ornaat;
14 ೧೪ ಆಕೆಯು ಬೂಟೇದಾರಿ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು.
Over bonte tapijten wordt zij voor den Koning geleid, Als bruidsmeisjes volgen haar de vriendinnen;
15 ೧೫ ಅವರು ಉಲ್ಲಾಸದಿಂದಲೂ, ಸಂತೋಷದಿಂದಲೂ ಬಂದು, ಅರಮನೆಯೊಳಗೆ ಪ್ರವೇಶಿಸುವರು.
En onder gejuich en gejubel Trekken zij in het paleis van den Koning!
16 ೧೬ ನಿನ್ನ ಪೂರ್ವಿಕರ ಸ್ಥಳಗಳಲ್ಲಿ ನಿನ್ನ ಮಕ್ಕಳು ಇರುವರು; ನೀನು ಅವರನ್ನು ಭೂಮಿಯ ಮೇಲೆಲ್ಲಾ ಅಧಿಕಾರಿಗಳನ್ನಾಗಿ ನೇಮಿಸುವಿ.
Dan worden in plaats van uw vaderen U zonen geboren, En Gij stelt ze over heel de aarde tot koningen aan.
17 ೧೭ ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.
Zij zullen uw Naam doen gedenken Van geslacht tot geslacht; En volken zullen U prijzen Voor eeuwig en immer!