< ಕೀರ್ತನೆಗಳು 46 >

1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
聖歌隊の指揮者によって女の声のしらべにあわせてうたわせたコラの子の歌 神はわれらの避け所また力である。悩める時のいと近き助けである。
2 ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.
このゆえに、たとい地は変り、山は海の真中に移るとも、われらは恐れない。
3 ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? (ಸೆಲಾ)
たといその水は鳴りとどろき、あわだつとも、そのさわぎによって山は震え動くとも、われらは恐れない。 (セラ)
4 ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.
一つの川がある。その流れは神の都を喜ばせ、いと高き者の聖なるすまいを喜ばせる。
5 ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.
神がその中におられるので、都はゆるがない。神は朝はやく、これを助けられる。
6 ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.
もろもろの民は騒ぎたち、もろもろの国は揺れ動く、神がその声を出されると地は溶ける。
7 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. (ಸೆಲಾ)
万軍の主はわれらと共におられる、ヤコブの神はわれらの避け所である。 (セラ)
8 ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.
来て、主のみわざを見よ、主は驚くべきことを地に行われた。
9 ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.
主は地のはてまでも戦いをやめさせ、弓を折り、やりを断ち、戦車を火で焼かれる。
10 ೧೦ “ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.
「静まって、わたしこそ神であることを知れ。わたしはもろもろの国民のうちにあがめられ、全地にあがめられる」。
11 ೧೧ ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. (ಸೆಲಾ)
万軍の主はわれらと共におられる、ヤコブの神はわれらの避け所である。 (セラ)

< ಕೀರ್ತನೆಗಳು 46 >