< ಕೀರ್ತನೆಗಳು 47 >
1 ೧ ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
可拉后裔的诗,交与伶长。 万民哪,你们都要拍掌! 要用夸胜的声音向 神呼喊!
2 ೨ ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
因为耶和华至高者是可畏的; 他是治理全地的大君王。
3 ೩ ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
他叫万民服在我们以下, 又叫列邦服在我们脚下。
4 ೪ ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. (ಸೆಲಾ)
他为我们选择产业, 就是他所爱之雅各的荣耀。 (细拉)
5 ೫ ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
神上升,有喊声相送; 耶和华上升,有角声相送。
6 ೬ ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.
你们要向 神歌颂,歌颂! 向我们王歌颂,歌颂!
7 ೭ ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
因为 神是全地的王; 你们要用悟性歌颂。
8 ೮ ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
神作王治理万国; 神坐在他的圣宝座上。
9 ೯ ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.
列邦的君王聚集要作亚伯拉罕之 神的民。 因为世界的盾牌是属 神的; 他为至高!