< ಕೀರ್ತನೆಗಳು 47 >

1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
聖歌隊の指揮者によってうたわせたコラの子の歌 もろもろの民よ、手をうち、喜びの声をあげ、神にむかって叫べ。
2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
いと高き主は恐るべく、全地をしろしめす大いなる王だからである。
3 ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
主はもろもろの民をわれらに従わせ、もろもろの国をわれらの足の下に従わせられた。
4 ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. (ಸೆಲಾ)
主はその愛されたヤコブの誇をわれらの嗣業として、われらのために選ばれた。 (セラ)
5 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
神は喜び叫ぶ声と共にのぼり、主はラッパの声と共にのぼられた。
6 ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.
神をほめうたえよ、ほめうたえよ、われらの王をほめうたえよ、ほめうたえよ。
7 ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
神は全地の王である。巧みな歌をもってほめうたえよ。
8 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
神はもろもろの国民を統べ治められる。神はその聖なるみくらに座せられる。
9 ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.
もろもろの民の君たちはつどい来て、アブラハムの神の民となる。地のもろもろの盾は神のものである。神は大いにあがめられる。

< ಕೀರ್ತನೆಗಳು 47 >