< ಕೀರ್ತನೆಗಳು 48 >
1 ೧ ಹಾಡು; ಕೋರಹೀಯರ ಕೀರ್ತನೆ. ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.
[Psalm lun Tulik natul Korah] LEUM GOD El fulat, ac fal in arulana kaksakinyuk El In siti sin God lasr, fineol mutal sel.
2 ೨ ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
Zion, eol sin God, el arulana fulat ac kato; Siti sin tokosra fulat ase engan nu fin faclu nufon.
3 ೩ ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.
God El akkalemye lah oasr nien moul misla yorol In pot ku lun siti sac.
4 ೪ ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು.
Tokosra puspis, wi mwet mweun lalos, elos fahsreni Ac tuku in mweuni Fineol Zion.
5 ೫ ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು.
Tusruktu ke elos liye Fineol Zion, elos arulana fwefela; Elos sangeng ac kaingla.
6 ೬ ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು.
Elos sangeng ac arulana tuninfongla ingo, Oana sie mutan su akola in isus,
7 ೭ ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
Ku oana oak palang su musalla ke sie paka lulap.
8 ೮ ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. (ಸೆಲಾ)
Kut lohng tari ke ma God El orala Ac inge kut liye In siti lun God lasr, LEUM GOD Kulana; El ac fah karingin siti sac nwe tok ma pahtpat.
9 ೯ ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;
Ke kut muta in Tempul lom, O God, Kut nunku ke lungse kawil lom.
10 ೧೦ ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.
Mwet uh kaksakin kom in acn nukewa, Ac pungom fahsrelik nu fin faclu nufon. Kom kol mwet uh ke suwoswos.
11 ೧೧ ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.
Lela mwet in Zion in enganak! Tuh kom oru nununku suwohs; Lela in oasr engan in siti nukewa in Judah!
12 ೧೨ ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.
Mwet lun God, kowos fahsr rauni acn Zion ac oek tower fulat we;
13 ೧೩ ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.
Liye kalkal we, ac lohang nu ke pot ku we, Tuh kowos in mau ku in srumun nu sin fwil tok ouinge:
14 ೧೪ ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.
“God se inge El God lasr nu tok ma pahtpat; El ac fah kol kut in pacl nukewa fahsru.”