< ಕೀರ್ತನೆಗಳು 48 >

1 ಹಾಡು; ಕೋರಹೀಯರ ಕೀರ್ತನೆ. ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.
Псалом песни сынов Кореовых, вторыя субботы. Велий Господь и хвален зело во граде Бога нашего, в горе святей Его,
2 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.
благокоренным радованием всея земли: горы Сионския, ребра северова, град Царя великаго.
3 ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.
Бог в тяжестех его знаемь есть, егда заступает и.
4 ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು.
Яко се, царие земстии собрашася, снидошася вкупе:
5 ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು.
тии видевше тако, удивишася, смятошася, подвигошася:
6 ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು.
трепет прият я тамо, болезни яко раждающия.
7 ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.
Духом бурным сокрушиши корабли Фарсийския.
8 ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. (ಸೆಲಾ)
Якоже слышахом, тако и видехом во граде Господа сил, во граде Бога нашего: Бог основа и в век.
9 ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;
Прияхом, Боже, милость Твою посреде людий Твоих.
10 ೧೦ ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.
По имени Твоему, Боже, тако и хвала Твоя на концах земли: правды исполнь десница Твоя.
11 ೧೧ ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.
Да возвеселится гора Сионская, и да возрадуются дщери Иудейския, судеб ради Твоих, Господи.
12 ೧೨ ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.
Обыдите Сион и обымите его, поведите в столпех его:
13 ೧೩ ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.
положите сердца ваша в силу его, и разделите домы его, яко да повесте в роде инем.
14 ೧೪ ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.
Яко Той есть Бог наш во век и в век века: Той упасет нас во веки.

< ಕೀರ್ತನೆಗಳು 48 >