< ಕೀರ್ತನೆಗಳು 49 >

1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.
科辣黑後裔歌,用高音,交與樂官。 關於這事,請萬民都要靜聽,普世居民,請你們側耳細聽,
2 ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.
不論貧富無分縉紳百姓,請你們都一一側耳聆聽。
3 ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.
我的口要宣講智慧,我的心要思念哲理。
4 ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.
我要側耳恭聽諺語,我要鼓琴解釋隱語。
5 ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?
當陷害我者的毒謀圍我時,在我困厄的日期,我有何所懼?
6 ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.
因為他們只知依恃財產的富足,他們只會誇耀自己金錢的豐裕;
7 ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.
但是金錢不能使任何人得救,決不能把人的贖債還給天主,
8 ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.
因為人命的贖債非常昂貴,任何金錢也決不足以贖回,
9 ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.
不能使人生存久長,不能使人不見死亡。
10 ೧೦ ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
你看,智者死去,愚昧者也同樣沉淪,他們都將自己的財產遺留給別人。
11 ೧೧ ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.
他們雖然曾以自己的名號,給一些地方命名,但是他們永久的住宅,萬代的居所卻是墳塋。
12 ೧೨ ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.
人在富貴中絕不能久長,將與牲畜無異,同樣死亡。
13 ೧೩ ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. (ಸೆಲಾ)
這就是自滿昏愚者的終途,這就是自誇幸運者的末路。
14 ೧೪ ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು. (Sheol h7585)
他們就如羊群一般被人趕入深坑,死亡要牧放他們,義人要主宰他們。他們的容貌即刻色衰,陰間將是他們的住宅。 (Sheol h7585)
15 ೧೫ ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. (ಸೆಲಾ) (Sheol h7585)
但是天主必救我靈脫離陰府,因為祂要把我接走。 (Sheol h7585)
16 ೧೬ ಒಬ್ಬನ ಐಶ್ವರ್ಯವೂ, ಗೃಹವೈಭವವೂ ವೃದ್ಧಿಯಾದಾಗ ಕಳವಳಪಡಬೇಡ.
不要嫉妒他人變成富翁,不要忌恨他人家產倍增;
17 ೧೭ ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.
因為他死時什麼也不能帶走,他的財產也不能隨著他同去。
18 ೧೮ ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ,
他在生時雖我陶醉說:「只要你幸福,人必誇讚你。」
19 ೧೯ ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.
他終要回去和他的祖先相逢,永永遠遠他再不能看到光明。
20 ೨೦ ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.
人在富貴中,不深思遠慮,將與牲畜無異,都要死去

< ಕೀರ್ತನೆಗಳು 49 >