< ಕೀರ್ತನೆಗಳು 49 >
1 ೧ ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.
A karmesternek. Kórach fiaitól. Zsoltár. Halljátok ezt, mind a népek, figyeljetek, mind a világ lakói,
2 ೨ ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.
ember fiai is, férfi fiai is, egyaránt gazdag és szűkölködő!
3 ೩ ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.
Szájam bölcseséget beszél és szívem gondolata értelem.
4 ೪ ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.
Példázatnak hajtom oda fülemet, hárfa mellett nyitom meg rejtvényemet.
5 ೫ ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?
Miért féljek bajnak napjaiban, mikor bűn környez sarkaimon
6 ೬ ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.
A kik vagy onukban bíznak s nagy gazdagságukkal dicsekszenek –
7 ೭ ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.
testvérét megváltani nem váltja meg senki, nem adhatja Istennek a váltságdíjat.
8 ೮ ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.
Hisz drága volna saját lelkük megváltása – abban is hagyja örökre –
9 ೯ ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.
hogy tovább élne, mindétig, nem látná a vermet.
10 ೧೦ ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
Bizony, látja! Bölcsek meghalnak, balga és oktalan egyaránt elvesznek és másokra hagyják vagyonukat.
11 ೧೧ ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.
Belső gondolatuk: házaik örökre megmaradnak, lakásaik nemzedékre meg nemzedékre; nevükkel nevezték meg a. földeket.
12 ೧೨ ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.
De az ember az ő dicsőségében nem marad meg, hasonlít a barmokhoz, melyek elpusztulnak.
13 ೧೩ ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. (ಸೆಲಾ)
Ez az útjuk az ő balgaságuk; utánuk is lesznek, kik beszédjüket kedvelik. Széla.
14 ೧೪ ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು. (Sheol )
Mint juhokat, az alvilágba tették, a halál legelteti őket; majd uralkodnak rajtuk reggelre az egyenesek, és alakjukat elenyészteti az alvilág, hogy hajlékuk se legyen. (Sheol )
15 ೧೫ ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. (ಸೆಲಾ) (Sheol )
Ámde Isten megváltja lelkemet az alvilág hatalmától, mert magához vesz engem. Széla. (Sheol )
16 ೧೬ ಒಬ್ಬನ ಐಶ್ವರ್ಯವೂ, ಗೃಹವೈಭವವೂ ವೃದ್ಧಿಯಾದಾಗ ಕಳವಳಪಡಬೇಡ.
Ne félj, midőn meggazdagszik valaki, midőn sokasodik háza dicsősége;
17 ೧೭ ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.
mert holtában nem visz el semmit, nem száll le ő utána dicsősége.
18 ೧೮ ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ,
Bár életében önnönmagát áldja, és magasztalnak téged, midőn jót teszel magaddal:
19 ೧೯ ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.
odajutsz őseid nemzedéhéhez, kik örökre nem látnak világosságot.
20 ೨೦ ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.
Ember az ő dicsőségében, de értelem hiján, hasonlít a barmokhoz, melyek elpusztulnak.