< ಕೀರ್ತನೆಗಳು 5 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ. ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ.
(Til sangmesteren. El-hannehilot. En salme af David.) HERRE, lytt til mit Ord og agt på mit suk,
2 ೨ ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು.
lån Øre til mit Nødråb, min Konge og Gud, thi jeg beder til dig!
3 ೩ ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
Årle hører du, HERRE, min Røst, årle bringer jeg dig min Sag og spejder.
4 ೪ ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.
Thi du er ikke en Gud, der ynder Ugudelighed, den onde kan ikke gæste dig,
5 ೫ ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.
for dig skal Dårer ej træde frem, du hader hver Udådsmand,
6 ೬ ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.
tilintetgør dem, der farer med Løgn; en blodstænkt, svigefuld Mand er HERREN en Afsky.
7 ೭ ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.
Men jeg kan gå ind i dit Hus af din store Nåde og vendt mod dit hellige Tempel bøje mig i din Frygt.
8 ೮ ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.
Så led mig for mine Fjenders Skyld i din Retfærd, HERRE, jævn din Vej for mit Ansigt!
9 ೯ ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.
Thi blottet for Sandhed er deres Mund, deres Hjerte en Afgrund, Struben en åben Grav, deres Tunge er glat.
10 ೧೦ ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.
Døm dem, o Gud, lad dem falde for egne Rænker, bortstød dem for deres Synders Mængde, de trodser jo dig.
11 ೧೧ ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.
Lad alle glædes, som lider på dig, evindelig frydes, skærm dem, som elsker dit Navn, lad dem juble i dig!
12 ೧೨ ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.
Thi du velsigner den retfærdige, HERRE, du dækker ham med Nåde som Skjold.