< ಕೀರ್ತನೆಗಳು 50 >
1 ೧ ಆಸಾಫನ ಕೀರ್ತನೆ. ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.
১পৰাক্রমী ঈশ্বৰ যিহোৱাই কথা কলে, সূৰ্যৰ উদয় স্থানৰ পৰা অস্ত যোৱা স্থানলৈকে পৃথিবীৰ সকলোকে তেওঁ মাতিলে।
2 ೨ ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.
২চিয়োনৰ পৰা, পৰিপূর্ণ সৌন্দর্যৰ ঠাইৰ পৰা, ঈশ্বৰে দীপ্তি প্ৰকাশ কৰিলে।
3 ೩ ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
৩আমাৰ ঈশ্বৰ আহিছে, তেওঁ নীৰৱ হৈ নাথাকিব; তেওঁৰ আগে আগে গ্রাসকাৰী অগ্নি আহিব, তেওঁৰ চাৰিওফালে অতিশয় ধুমুহা বব।
4 ೪ ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.
৪তেওঁ নিজৰ লোকসকলৰ ন্যায় বিচাৰ কৰিবৰ কাৰণে, তেওঁ ওপৰৰ আকাশ-মণ্ডলক আৰু পৃথিবীক মাতিছে।
5 ೫ “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.
৫“মোৰ সেই বিশ্বাসী ভক্তসকলক মোৰ ওচৰত একগোট কৰা, যিসকলে উৎসৰ্গৰ দ্বাৰাই মোৰ লগত এক নিয়ম স্থাপন কৰিলে।”
6 ೬ ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. (ಸೆಲಾ)
৬আকাশ-মণ্ডলে তেওঁৰ ধাৰ্মিকতা ঘোষণা কৰিছে; কিয়নো ঈশ্বৰ নিজেই বিচাৰকর্তা। (চেলা)
7 ೭ ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.
৭হে মোৰ লোকসকল, শুনা, মই কথা ক’ম; হে ইস্ৰায়েল, মই তোমাৰ বিপক্ষে সাক্ষ্য দিম; মই ঈশ্বৰ, তোমাৰেই ঈশ্বৰ।
8 ೮ ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.
৮তোমাৰ উৎসর্গৰ বাবে মই তোমাক দোষী কৰা নাই; তোমাৰ হোমবলিবোৰ সদায় মোৰ সন্মুখত আছে।
9 ೯ ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.
৯তোমাৰ ঘৰৰ পৰা ভতৰা মই নলওঁ; তোমাৰ গঁৰালৰ ছাগলীও মই গ্ৰহণ নকৰোঁ।
10 ೧೦ ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.
১০কিয়নো সকলো বনৰীয়া জন্তু মোৰেই, অসংখ্য পাহাৰবোৰৰ ওপৰত ঘূৰি ফুৰা পশুবোৰ মোৰেই।
11 ೧೧ ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.
১১এনেকি, পাহাৰৰ সকলো পক্ষীক মই জানো; পথাৰত চৰি ফুৰা সকলো প্ৰাণীও মোৰেই।
12 ೧೨ ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.
১২“মোৰ ভোক লাগিলেও মই তোমাক নক’ম; কিয়নো জগত আৰু তাত থকা সকলো মোৰেই।
13 ೧೩ ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?
১৩ভতৰাৰ মাংস মই ভোজন কৰিম নে? মই ছাগলীবোৰৰ তেজ পান কৰিম নে?
14 ೧೪ ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
১৪ঈশ্বৰৰ উদ্দেশে ধন্যবাদৰ বলি উৎসৰ্গ কৰা; সৰ্ব্বোপৰি জনাৰ উদ্দেশ্যে তোমাৰ সঙ্কল্পবোৰ পূৰণ কৰা।
15 ೧೫ ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
১৫সঙ্কটৰ কালত মোৰ আগত প্ৰাৰ্থনা কৰা; মই তোমাক উদ্ধাৰ কৰিম আৰু তুমি মোক গৌৰৱান্বিত কৰিবা।”
16 ೧೬ ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
১৬কিন্তু ঈশ্বৰে দুষ্ট লোকক এই কথা কৈছে, “মোৰ শাসন-বিধিৰ কথাবোৰ কবলৈ অথবা মোৰ ব্যৱস্থাৰ কথা মুখত আনিবলৈ তোমাৰ কি অধিকাৰ আছে?
17 ೧೭ ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
১৭কাৰণ তুমিতো মোৰ শাসন ঘৃণা কৰা; মোৰ কথাবোৰ পাছফালে পেলাই থোৱা।
18 ೧೮ ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.
১৮চোৰক দেখিলে তুমি তাৰ লগত বন্ধুত্ব কৰা; তুমি ব্যভিচাৰীবোৰৰ সহযোগী হৈ থাকা।
19 ೧೯ ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ.
১৯দুষ্ট কথাৰ কাৰণে তোমাৰ মুখ খোলা ৰাখা, তোমাৰ জিভাই ছলনাৰ বশত থাকি কথা কয়।
20 ೨೦ ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.
২০তুমি বহি বহি নিজৰ আত্মীয়ৰ বিৰুদ্ধে কথা কৈ থাক; একে মাতৃৰ নিজৰ ভাইৰ বিৰুদ্ধে নিন্দা কৰা।
21 ೨೧ ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.
২১এই সকলোবোৰ তুমি কৰিছা, কিন্তু মই মনে মনে আছিলোঁ; তুমি ভাৱিছা, মই তোমাৰেই নিচিনা এজন। কিন্তু এতিয়া মই তোমাক ধমকি দিম আৰু তোমাৰ সন্মুখত তোমাৰ সকলো দোষ লৈ আনিম।
22 ೨೨ ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
২২তোমালোক যিসকলে ঈশ্বৰক পাহৰি গৈছা, তাক এবাৰ ভাৱি চোৱা; নহ’লে মই তোমালোকক ছিৰি ডোখৰ ডোখৰ কৰি পেলাম; তোমালোকক উদ্ধাৰ কৰিবলৈ কোনো নাথাকিব।
23 ೨೩ ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”
২৩যি মানুহে জীৱনত ধন্যবাদৰ বলি উৎসৰ্গ কৰে, তেৱেঁই মোক গৌৰৱাম্বিত কৰে; যি মানুহে সঠিক পথত চলে, মই তেওঁক ঈশ্বৰৰ পৰিত্ৰাণ দেখিবলৈ দিম।