< ಕೀರ್ತನೆಗಳು 51 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.
a karmesternek. Zsoltár Dávidtól. Mikor odament Nátán próféta hozzá, a midőn bement volt Bát-Sébához. Könyörülj rajtam, Istenem, kegyelmed szerint; irgalmad bősége szerint töröld el bűntetteimet.
2 ೨ ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
Sokszorosan moss meg engem bűnömtől, és vétkemtől tisztíts meg.
3 ೩ ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
Mert bűntetteimet tudom én, és vétkem előttem van mindig.
4 ೪ ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
Egyedül ellened vétkeztem, a mi rossz a szemeidben, azt tettem; azért, hogy igaznak bizonyulj szóltadban, jogosnak itéltedben.
5 ೫ ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.
Lám, bűnben születtem, s vétekben fogant engem anyám.
6 ೬ ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.
Lám, igazat kivánsz a vesékben, s a bensőben bölcseséget tudatsz velem.
7 ೭ ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
Tisztíts meg engem izsóppal, hogy tiszta legyek, moss meg, hogy hónál fehérebb legyek.
8 ೮ ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದಪಡುವವು.
Hallass velem vígságot és örömet, újjongjanak a csontok, melyeket összezúztál.
9 ೯ ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.
Rejtsd el arczodat vétkeimtől s mind a bűneimet töröld el.
10 ೧೦ ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
Tiszta szívet teremts nekem, Isten, és szilárd szell emet ujíts meg én bennem.
11 ೧೧ ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.
Ne vess el engem színed elöl, s szent szellemedet ne vedd el tőlem.
12 ೧೨ ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.
Add vissza nekem üdvöd vígságát, és készséges szellemmel támassz engem.
13 ೧೩ ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.
Hadd tanítsam az elpártolókat útjaidra, hogy a vétkesek hozzád megtérjenek.
14 ೧೪ ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.
Ments meg engem vérbűntől, Isten, segedelmem Istene; újjongjon a nyelvem igazságodon.
15 ೧೫ ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.
Uram, ajkaimat nyisd meg, hogy szájam hirdesse dicséretedet.
16 ೧೬ ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.
Mert nem kivánsz vágóáldozatot, hisz adnám; égőáldozatot nem kedvelsz.
17 ೧೭ ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.
Istennek vágóáldozatai: megtört lélek; megtört, zúzott szívet, oh Isten, nem vetsz meg.
18 ೧೮ ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.
Tégy jót Cziónnal kedvességedben, építsd fel Jeruzsálem falait;
19 ೧೯ ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.
akkor kivánsz majd igazsággal való vágóáldozatokat, égőáldozatot és egész áldozatot, akkor tulkok feljutnak oltárodra.