< ಕೀರ್ತನೆಗಳು 52 >
1 ೧ ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.
[Psalm lal David, ma Simla tukun Doeg, Mwet Edom, el som nu yorol Saul ac Fahk nu sel lah David el Som tari nu lohm sel Ahimelech.] O mwet fulat se, efu kom ku konkin ke ma koluk lom? Lungkulang lun God uh oan nwe tok.
2 ೨ ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.
Kom suk inkanek in akkolukye mwet saya. Loum oana sie resa kosroh. Kom kinauk kikiap in pacl nukewa.
3 ೩ ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. (ಸೆಲಾ)
Kom lungse ma koluk yohk liki ma wo, Ac ma sutuu yohk liki ma pwaye.
4 ೪ ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
Kom lungsena akngalye mwet ke kas lom, kom mwet kikiap!
5 ೫ ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
Ke ma inge God El ac fah kunauskomla nwe tok; El ac fah sruokkomi ac tulakinkomla liki lohm sum; El ac fah moklekomla liki facl sin mwet moul.
6 ೬ ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ,
Ke mwet suwoswos elos ac liye ma inge elos ac fah sangeng; Na elos ac fah isrun kom ac fahk,
7 ೭ “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
“Liye, pa inge sie mwet su tia suk kasru sin God, A el lulalfongi na ke mwe kasrup yohk lal sifacna, Ac suk moul misla nu sel ke inkanek in sulallal.”
8 ೮ ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
A funu nga, nga oana soko sak olive su kapak in lohm sin God; Nga ac lulalfongi ke lungse kawil lal nwe tok.
9 ೯ ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.
Nga ac fah kulo nu sum pacl nukewa, O God, ke orekma lom; Ye mutun mwet lom Nga ac fah fahkak tuh kom wo.