< ಕೀರ್ತನೆಗಳು 52 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? ದೇವರ ಕೃಪೆಯು ಯಾವಾಗಲೂ ಇರುವುದು.
ऐ ज़बरदस्त, तू शरारत पर क्यूँ फ़ख़्र करता है? ख़ुदा की शफ़क़त हमेशा की है।
2 ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.
तेरी ज़बान महज़ शरारत ईजाद करती है; ऐ दग़ाबाज़, वह तेज़ उस्तरे की तरह है।
3 ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. (ಸೆಲಾ)
तू बदी को नेकी से ज़्यादा पसंद करता है, और झूट को सदाक़त की बात से।
4 ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
ऐ दग़ाबाज़ ज़बान! तू मुहलिक बातों को पसंद करती है।
5 ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
ख़ुदा भी तुझे हमेशा के लिए हलाक कर डालेगा; वह तुझे पकड़ कर तेरे ख़ेमे से निकाल फेंकेगा, और ज़िन्दों की ज़मीन से तुझे उखाड़ डालेगा। (सिलाह)
6 ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ,
सादिक़ भी इस बात को देख कर डर जाएँगे, और उस पर हँसेंगे,
7 “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
कि देखो, यह वही आदमी है जिसने ख़ुदा को अपनी पनाहगाह न बनाया, बल्कि अपने माल की ज़यादती पर भरोसा किया, और शरारत में पक्का हो गया।
8 ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
लेकिन मैं तो ख़ुदा के घर में जैतून के हरे दरख़्त की तरह हूँ। मेरा भरोसा हमेशा से हमेशा तक ख़ुदा की शफ़क़त पर है।
9 ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.
मैं हमेशा तेरी शुक्रगुज़ारी करता रहूँगा, क्यूँकि तू ही ने यह किया है; और मुझे तेरे ही नाम की आस होगी, क्यूँकि वह तेरे पाक लोगों के नज़दीक खू़ब है।

< ಕೀರ್ತನೆಗಳು 52 >