< ಕೀರ್ತನೆಗಳು 53 >
1 ೧ ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಪದ್ಯ. ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.
聖歌隊の指揮者によってマハラテのしらべにあわせてうたわせたダビデのマスキールの歌 愚かな者は心のうちに「神はない」と言う。彼らは腐れはて、憎むべき不義をおこなった。善を行う者はない。
2 ೨ ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
神は天から人の子を見おろして、賢い者、神を尋ね求める者があるかないかを見られた。
3 ೩ ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.
彼らは皆そむき、みなひとしく堕落した。善を行う者はない、ひとりもない。
4 ೪ ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ.
悪を行う者は悟りがないのか。彼らは物食うようにわが民を食らい、また神を呼ぶことをしない。
5 ೫ ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.
彼らは恐るべきことのない時に大いに恐れた。神はよこしまな者の骨を散らされるからである。神が彼らを捨てられるので、彼らは恥をこうむるであろう。
6 ೬ ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.
どうか、シオンからイスラエルの救が出るように。神がその民の繁栄を回復される時、ヤコブは喜び、イスラエルは楽しむであろう。