< ಕೀರ್ತನೆಗಳು 54 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.
Til sangmesteren, med strengelek; en læresalme av David, da sifittene kom og sa til Saul: David holder sig skjult hos oss. Gud, frels mig ved ditt navn, og hjelp mig til min rett ved din kraft!
2 ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು.
Gud, hør min bønn, vend øret til min munns ord!
3 ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. (ಸೆಲಾ)
For fremmede har reist sig imot mig, og voldsmenn står mig efter livet; de har ikke Gud for øie. (Sela)
4 ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು.
Se, Gud hjelper mig, Herren er den som opholder mitt liv.
5 ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು.
Det onde skal falle tilbake på mine fiender; utrydd dem i din trofasthet!
6 ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.
Med villig hjerte vil jeg ofre til dig; jeg vil prise ditt navn, Herre, fordi det er godt.
7 ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.
For av all nød frir han mig ut, og på mine fiender ser mitt øie med lyst.

< ಕೀರ್ತನೆಗಳು 54 >